ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಬೇಸರ ಹೊರಹಾಕಿದ್ದಾರೆ.
ಇರಾನ್-ಇಸ್ರೇಲ್ ಸಂಘರ್ಷದ ಕಾರಣದಿಂದ ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರವಾಸೋದ್ಯಮ ನಗರ ಮೈಸೂರಿಗೆ ಬರೋಕೆ ಯೋಚನೆ ಮಾಡುವಂತಾಗಿದೆ. ಈಗಾಗಲೇ ಕೇಳಿ ಕೇಳಿ ರೂಂ ಬುಕ್ ಮಾಡಿದ್ದಾರೆ. ಕೆಲವು ಕಡೆ ಊಟದ ವಿಚಾರಕ್ಕೆ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಸಚಿವ ಮುನಿಯಪ್ಪ ಅವರು ಒಂದು ವಾರ ತಡೆದುಕೊಳ್ಳಬೇಕು ಎಂದಿದ್ದಾರೆ. ನಾವು ತಡೆದುಕೊಂಡರೆ ಪ್ರವಾಸಿಗರಿಗೆ ಊಟ ಕೊಡುವುದು ಹೇಗೆ. ಈಗಾಗಲೇ 10% ಹೋಟೆಲ್ ಮುಚ್ಚಿವೆ. ಖಾಸಗಿಯಾಗಿ ಹೆಚ್ಚು ಹಣ ಕೊಟ್ಟು ಸಿಲಿಂಡರ್ ಪಡೆದುಕೊಂಡಿರುವುದರಿಂದ ಇಷ್ಟಾಗಿದೆ. ಇಲ್ಲದೇ ಇದ್ದರೆ ಪರಿಸ್ಥಿತಿ ಇನ್ನೂ ಶೋಚನೀಯ ಸ್ಥಿತಿಗೆ ಬರುತ್ತಿತ್ತು. ರಾಜ್ಯ ಸರ್ಕಾರ ತಕ್ಷಣ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳು ಶೇಕಡಾ.10 ರಷ್ಟು ಇರುವ ಕಮರ್ಷಿಯಲ್ ಸಿಲಿಂಡರ್ ಅನ್ನು ಶೇಕಡಾ.25ರಷ್ಟು ನೀಡುವಂತೆ ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳು ಮನಸ್ಸು ಮಾಡಿದರೆ ತಕ್ಷಣ ಈ ಸಮಸ್ಯೆ ಬಗೆಹರಿಸಬಹುದು. ನಿನ್ನೆ ವರಕೋಡು ಹಬ್ಬಕ್ಕೂ ಒಂದು ಲೋಡ್ ಸಿಲಿಂಡರ್ ಅನ್ನು ಸಿಎಂ ಕೊಡಿಸಿದ್ದಾರೆ. ಒಂದು ವಾರ, ಹತ್ತು ದಿನ ಕಾಯೋದು ಬೇಡ. ಸರ್ಕಾರ ತಕ್ಷಣ ಕ್ರಮ ವಹಿಸಬೇಕು. ತೆರಿಗೆ ಕಟ್ಟುವ ಉದ್ದಿಮೆದಾರರ ಹಿತ ಕಾಯಬೇಕು. ದಯವಿಟ್ಟು ಶೇಕಡಾ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ ಎಂದು ಆಗ್ರಹಿಸಿದರು.
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…