ಮೈಸೂರು : ಮದುವೆಯಾಗುವುದಾಗಿ ನಂಬಿಸಿ ಶಿಕ್ಷಕಿಗೆ 11.76 ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.
ವಿಜಯನಗರದ ನಿವಾಸಿ, ಖಾಸಗಿ ಶಾಲೆಯ ಶಿಕ್ಷಕಿ ಹಣ ಕಳೆದುಕೊಂಡವರು. ಸಚಿನ್ ಎಂಬಾತ ಹಣ ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮ್ಯಾಟ್ರಮೋನಿಯಲ್ಲಿ ಪರಿಚಯವಾದ ಸಚಿನ್ ಎಂಬಾತ ತಾನು ವಿದೇಶದಲ್ಲಿದ್ದು, ನಿಮ್ಮನ್ನು ಮದುವೆಯಾಗುತ್ತೇನೆ ಎಂದು ಪ್ರಸ್ತಾಪಿಸಿ ಬಳಿಕ ನಿಮ್ಮನ್ನು ಭೇಟಿಯಾಗಲು ಭಾರತಕ್ಕೆ ಬರುತ್ತೇನೆ ಎಂದು ನಂಬಿಸಿದ್ದಾನೆ. ಈ ವೇಳೆ ಗಿಫ್ಟ್ ಕಳುಹಿಸುವುದಾಗಿ ಹೇಳಿ 35 ಸಾವಿರ ರೂ. ಪಡೆದಿದ್ದು, ಬಳಿಕ 11.76 ಲಕ್ಷ ರೂ.ಗಳನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ಈಗ ಹಣ ವಾಪಸ್ ನೀಡದೇ ವಂಚಿಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.





