ಮೈಸೂರು ನಗರ

ಎರಡನೇ ದಿನಕ್ಕೆ ಕಾಲಿಟ್ಟ ಬಹುರೂಪಿ ನಾಟಕೋತ್ಸವ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ ಬಹುರೂಪಿ ನಾಟಕೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಮೈಸೂರಿನ ರಂಗಾಯಣದ ಆವರಣದಲ್ಲಿ ರಂಗೋತ್ಸವ ನಡೆಯುತ್ತಿದ್ದು, ಎರಡನೇ ದಿನವಾದ ಇಂದು ಜನರಲ್ಲಿ ನಿರಾಸಕ್ತಿ ಮೂಡಿದೆ ಎನ್ನಲಾಗುತ್ತಿದೆ. ಬೆಳಿಗ್ಗೆ ಹಾಗೂ ಮಧ್ಯಾಹ್ನ ನಡೆಯುವ ಚಲನಚಿತ್ರೋತ್ಸವಕ್ಕೆ ಜನರು ಬಾರದ ಹಿನ್ನೆಲೆಯಲ್ಲಿ ರಂಗಾಯಣದ ಆವರಣ ಬಿಕೋ ಎನ್ನುತ್ತಿದೆ. ಬೆಳಗ್ಗೆ 10.30 ರಿಂದ 12, 12 ರಿಂದ 1.30 ಮತ್ತು 2 ರಿಂದ 4.30ರವರೆಗೆ ಚಲನಚಿತ್ರೋತ್ಸವ ನಡೆಯಲಿದ್ದು, ಶ್ರೀರಂಗದಲ್ಲಿ ನಡೆಯುತ್ತಿರುವ ಪ್ರೀಡಂ ಈಸ್ ಬ್ಯೂಟಿಫುಲ್ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ಚಲನಚಿತ್ರ ವೀಕ್ಷಣೆ ಮಾಡುತ್ತಿದ್ದು, ಸಂಜೆ ನಡೆಯುವ ನಾಟಕಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನಾಟಕಾಸಕ್ತರು ಬರುವ ನಿರೀಕ್ಷೆಯಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ವೀಕ್ಷಕರು, ನಿನ್ನೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ರಜೆಯಿದ್ದ ಹಿನ್ನೆಲೆಯಲ್ಲಿ ನಾಟಕೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ರು. ಇಂದು ಬದ್ದತೆ ಇರುವವರು ಮಾತ್ರ ಬಂದಿದ್ದಾರೆ. ಆಮೇಲೆ ಪ್ರಚಾರದ ಕೊರತೆನೂ ಇರಬಹುದು. ಇವತ್ತು ದರ್ಶನ್ ಸಂಕ್ರಾಂತಿ ಹಬ್ಬ ಆಚರಿಸಿದ್ರು ಎಂದು ಹೆಡ್‌ಲೈನ್ ಸುದ್ದಿ ಮಾಡುತ್ತಾರೆ. ಾದರೆ ನಾಟಕೋತ್ಸವದಂತಹ ಉಪಯುಕ್ತ ಮಾಹಿತಿಗಳನ್ನು ಮಾಧ್ಯಮಗಳು ಜನರಿಗೆ ತಿಳಿಸುವ ಕೆಲಸ ಮಾಡಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

13 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

14 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

15 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago