ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಆಗಿದೆ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇದು ರೈತರ ಅಭಿವೃದ್ಧಿಗೆ ಪೂರಕವಲ್ಲದ ಬಜೆಟ್ ಆಗಿದೆ. ರೈತ ಬೆಳೆದ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿ ಕಾಯ್ದೆಯ ಜಾರಿ ಬಗ್ಗೆ ಕ್ರಮ ಕೈಗೊಂಡಿಲ್ಲ. ಬಜೆಟ್‌ನಲ್ಲಿ ಸ್ವಾಮಿನಾಥನ್ ವರದಿ ಜಾರಿಯ ಬಗ್ಗೆ ಕ್ರಮ ಕೈಗೊಂಡಿಲ್ಲ. ರೈತರ ಸಾಲ ಮನ್ನದ ಪ್ರಸ್ತಾಪವಿಲ್ಲ. ಕೃಷಿ ಸಾಲದ ನೀತಿ ರೈತನ ಹೊಲದಲ್ಲಿನ ಕಬ್ಬಿನ ದರದ ಬಗ್ಗೆ ಪ್ರಸ್ತಾಪವಿಲ್ಲ. ರೈತರ ಬೆಳೆ ವಿಮೆ ನೀತಿಯನ್ನು ವೈಯಕ್ತಿಕ ವಿಮೆ ರೀತಿ ಜಾರಿಗೆ ತರಬೇಕಾಗಿತ್ತು. ರೈತರ ಕೃಷಿ ಉತ್ಪನ್ನಗಳನ್ನು. ವರ್ಷಪೂರ್ತಿ ಖರೀದಿ ಕೇಂದ್ರಗಳ ಆರಂಭಕ್ಕೆ ಕ್ರಮ ಕೈಗೊಂಡಿಲ್ಲ. ಎಲ್ಲಾ ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ. ಬೆಲೆ ಕುಸಿತವಾದಾಗ ಖರೀದಿ ಮಾಡುವ ಯೋಜನೆಯನ್ನು ಪ್ರಕಟಣೆ ಮಾಡಿಲ್ಲ. ಕೇವಲ ತೆಂಗು ಗೋಡಂಬಿ ಶ್ರೀಗಂಧ ಬೆಳೆಗೆ ಮಾತ್ರ ವಿಶೇಷ ಗಮನಹರಿಸಿ ರೈತರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು…
ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…
ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…
ನವದೆಹಲಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…
ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…