ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಕರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.
ಈ ಬಾರಿಯ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದ್ದು, ಈಗಾಗಲೇ ಮುಷ್ತಾಕ್ ಅವರಿಗೆ ದಸರಾಗೆ ಆಹ್ವಾನ ನೀಡಲಾಗಿದೆ.
ಆದರೆ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಈಗಾಗಲೇ ದಸರಾ ಉದ್ಘಾಟನೆ ನೆರವೇರಿಸುವಂತೆ ಲೇಖಕಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಲಾಗಿದೆ. ಇದೇ ಸೆಪ್ಟೆಂಬರ್.22ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.





