ಮೈಸೂರು ನಗರ

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಚಿತ್ರ ಸಂತೆ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಜನರನ್ನು ಸೂಜಿಗಲ್ಲಿನಂತೆ ಸೆಳೆಯುವಲ್ಲಿ ಯಶಸ್ವಿಯಾಯಿತು.

ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ಖಾನ್ ಅವರ ನೇತೃತ್ವದಲ್ಲಿ ನಡೆದ ಚಿತ್ರ ಸಂತೆಯಲ್ಲಿ ಐವತ್ತಕ್ಕೂ ಹೆಚ್ಚು ಕಲಾವಿದರು ವಿವಿಧ ಚಿತ್ರಗಳನ್ನು ಬಿಡಿಸಿ, ಪ್ರದರ್ಶಿಸುವ ಮೂಲಕ ಸಾರ್ವಜನಿಕರಿಂದ ಮೆಚ್ಚುಗೆ ಪಡೆದರು.
ವಾಟರ್ ಪೇಂಟಿಂಗ್ಸ್, ಪೆನ್ಸಿಲ್‌ನಿಂದ ಬಿಡಿಸಿದ ಚಿತ್ರ, ಮ್ಯಾಟ್ ಮೇಲೆ ಬಿಡಿಸಿದ ಚಿತ್ತಾರ, ಬಳಪದ ಕಲ್ಲು ಬಳಸಿ ಕೆತ್ತಿರುವ ವಿಗ್ರಹಗಳು, ತಾಮ್ರದಿಂದ ಕೆತ್ತಿರುವ ವಿಗ್ರಹಗಳು ನೋಡುಗರನ್ನು ಮುದಗೊಳಿಸಿದವು.ಇದೇ ವೇಳೆ ಸ್ಥಳದಲ್ಲಿಯೇ ಚಿತ್ರ ಬರೆಯುವ ಕಲಾವಿದರು ಜನರ ಗಮನಸೆಳೆದರು.

ಇದರ ಜೊತೆಗೆ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಆಯೋಜಿಸಿದ್ದ ಮೆಹಂದಿ ಹಚ್ಚುವ ಸ್ಪರ್ಧೆ, ತಿಂಡಿ, ತಿನಿಸುಗಳನ್ನು ತಯಾರಿಸುವ ಹಾಗೂ ಪಾನೀಯಗಳನ್ನು ತಯಾರಿಸುವ ಸ್ಪರ್ಧೆ ಆಕರ್ಷಣೀಯವಾಗಿತ್ತು.
ಮಕ್ಕಳಿಂದ ಹಿಡಿದು ೭೦ ವರ್ಷ ವಯಸ್ಸಿನ ಮಹಿಳೆಯರು ಕೂಡ ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ನೋಡುಗರಿಗೆ ಅಚ್ಚರಿ ಮೂಡಿಸಿದರು. ಅವರು ತಯಾರಿಸಿದ ಪಂಚಾಮೃತ, ಕೋಸಂಬುರಿ, ಸಿಹಿ ಹಾಗೂ ಖಾರದ ಅವಲಕ್ಕಿ ಸೇರಿದಂತೆ ಇನ್ನಿತರ ತಿನಿಸುಗಳ ರುಚಿಯನ್ನು ಗಣ್ಯರು ಸವಿದರು.

ಭಾನುವಾರ ಸಂಜೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಅವರು ಚಿತ್ರಸಂತೆಯನ್ನು ಉದ್ಘಾಟಿಸಿದರು. ಅವರೊಂದಿಗೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ಖಾನ್, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಎಂ.ಕೆ.ಸೋಮಶೇಖರ್, ಅಯೂಬ್‌ಖಾನ್ ಅವರು ಪ್ರಾಧಿಕಾರದ ಅಧ್ಯಕ್ಷರಾದ ನಂತರ ಹಲವು ಹೊಸತನಗಳನ್ನು ಜನರಿಗೆ ಪರಿಚಯಿಸಿದ್ದಾರೆ. ಇಲ್ಲಿ ಎಲ್ಲಾ ಕಲಾವಿದರನ್ನೂ ಒಂದೆಡೆ ಸೇರಿಸಿ ಅವರ ಕಲೆಯನ್ನು ಪ್ರದರ್ಶಿಸಿ, ಜನರಿಗೆ ಮುಟ್ಟಿಸಿರುವುದು ಶ್ಲಾಘನೀಯ ಎಂದರು. ಲಲಿತ ಕಲೆ ಮತ್ತು ಕರಕುಶಲ ಉಪ ಸಮಿತಿ ಅಧ್ಯಕ್ಷ ಉಮೇಶ್, ಕಾರ್ಯಾಧ್ಯಕ್ಷೆ ಲತಾ ರಂಗನಾಥ್, ಮಹಿಳಾ ಉದ್ದಿಮೆ ಉಪ ಸಮಿತಿ ಅಧ್ಯಕ್ಷೆ ಎಂ.ಛಾಯಮ್ಮ, ಉಪಾಧ್ಯಕ್ಷರಾದ ಫೈರೋಜ್‌ಖಾನ್ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

4 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

4 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

4 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

4 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

4 hours ago

ಸೀಸನಲ್‌ ಫ್ಲೂ ಹೆಚ್ಚಳ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್, ಜನವರಿಯಿಂದ…

4 hours ago