ಮೈಸೂರು: ಉದಯಗಿರಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಮಾಡುತ್ತಿರುವ ಹೋರಾಟವನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸರ ಮೂಲಕ ಸರ್ಕಾರ ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ನಾವು ಕೋರ್ಟ್ ನಲ್ಲಿ ಪರ್ಮಿಷನ್ ಕೇಳಿದ್ದೇವೆ. ಕೋರ್ಟ್ ಪರ್ಮಿಷನ್ ಸಿಕ್ಕಿದ ಬಳಿಕ ಪ್ರತಿಭಟನೆ ಮಾಡುತ್ತೇವೆ. ಮುಸ್ಲಿಂಮರ ಓಲೈಕೆಗೆ ಸರ್ಕಾರ ಈ ರೀತಿ ಮಾಡುತ್ತಿದೆ. ಅವರ ಓಲೈಕೆ ಬಿಟ್ಟು ಬೇರೇನೂ ಇಲ್ಲ ಎಂದು ಕಿಡಿಕಾರಿದರು.
ಇನ್ನು ಉದಯಗಿರಿಯಲ್ಲಿ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಪೋಸ್ಟ್ ಹಾಕಿದ್ದ ಸತೀಶ್ ಎಂಬಾತನನ್ನು ಪೊಲೀಸರು ಗಡಿಪಾರು ಮಾಡಿದ್ದು, ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಬಿಜೆಪಿ ನಾಯಕರು ಇಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಇದಕ್ಕೆ ಪೊಲೀಸರು ತಡೆವೊಡ್ಡುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎನ್ನಲಾಗಿದೆ.
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…