Mysore
14
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಸರ್ಕಾರ ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಿದೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ ಹಾಗೂ ನೋವಿದೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ.

ಚಾಮುಂಡಿಬೆಟ್ಟದ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು, ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು ಹಿಂದೂ ದೇವರು. ಯದುವಂಶದ ಮನೆದೇವರು ಕುಲದೇವಿ. ಯದುವಂಶಕ್ಕೆ ಚಾಮುಂಡಿ ದೇವಿ ಧಾರ್ಮಿಕ ತಾಯಿ ಇದ್ದಂತೆ. ದೇವಸ್ಥಾನ ಹಿಂದೂ ಧಾರ್ಮಿಕ ವಿಧಿ ವಿಧಾನದಿಂದ ಪೂಜೆ ನಡೆಯುತ್ತದೆ. ರಾಜಕಾರಣಿಗಳು ಏನೂ ಬೇಕಾದರು ಹೇಳಲಿ ಕರೆಯುವವರು ಏನಾದರೂ ಕರೆಯಲಿ. ಅವರು ಹೇಳಿದ ತಕ್ಷಣ ಅವರು ಹೇಳಿದಂತೆ ಆಗಲ್ಲ.
ನಮ್ಮ ಮನೆತನ ದೇವಸ್ಥಾನ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದೆ. ಪ್ರಾಧಿಕಾರ ರಚನೆಯಾದರೂ ಅದು ಅಧಿಕೃತ ಅಲ್ಲ. ನ್ಯಾಯಾಲಯದ ಆದೇಶ ಬಂದ ಮೇಲೆ ಅಷ್ಟೆ ಎಲ್ಲವೂ ಸ್ಪಷ್ಟ ಆಗುವುದು. 70 ವರ್ಷಗಳಿಂದ ಈ ಹೋರಾಟ ನ್ಯಾಯಾಲಯದಲ್ಲಿ ಇದೆ. ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ನನಗೆ ಬೇಸರವಿದೆ, ನೋವಿದೆ ಎಂದು ಅಸಮಾಧಾನ ಹೊರಹಾಕಿದರು.

ಇನ್ನು ದಸರಾ ಉದ್ಘಾಟಕರ ವಿಚಾರದಲ್ಲಿ ನನ್ನ ಅಭಿಪ್ರಾಯ ಇಲ್ಲ. ಕರೆದವರು, ಕರೆಸಿಕೊಂಡವರಿಗಷ್ಟೆ ಅದು ಗೊತ್ತು. ಸರ್ಕಾರದ ದಸರಾ ನಮ್ಮ ಪರಂಪರೆ ಭಾಗವಲ್ಲ. ನಮ್ಮ ದಸರಾ ಖಾಸಗಿಯಾಗಿಯೇ ನಡೆಯುತ್ತದೆ. ಸರ್ಕಾರ ಅವರಿಗೆ ಬೇಕಾದ ರೀತಿ ದಸರಾ ಮಾಡುತ್ತಿದೆ. ಅದಕ್ಕೂ ನಮಗೂ ಸಂಬಂಧ ಇಲ್ಲ. ದಸರಾ ದಿನ‌ ನಾನು ಅಂಬಾರಿ ಕಡೆ ಗಮನ ಕೊಡುವ ಕಾರಣ ನಾನು ಅಲ್ಲಿಗೆ ಹೋಗಲ್ಲ ನಮ್ಮ ಮನೆಯವರು ಒಬ್ಬರು ಹೋಗುತ್ತಾರೆ ಅಷ್ಟೆ. ದಸರಾ ವಿಚಾರದಲ್ಲಿ ಇಲ್ಲಿಯವರೆಗೆ ಆಗಿರುವ ರಾಜಕೀಯವೇ ಸಾಕು. ಆ ವಿಚಾರವನ್ನು ಇನ್ನು ಮುಂದುವರಿಸುವುದು ಬೇಡ ಎಂದು ಹೇಳಿದರು.

Tags:
error: Content is protected !!