ಮೈಸೂರು ನಗರ

ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂದು ಪರೋಕ್ಷವಾಗಿ ಹೇಳಿದರು. ಸಿಎಂ ಅಧಿಕಾರ ಹಂಚಿಕೆಯ ಪ್ರಸ್ತಾಪವೇ ನಡೆದಿಲ್ಲ. ನಡೆದಿಲ್ಲ ಎಂದ ಮೇಲೆ ಅದರ ಜಾರಿಯ ಬಗ್ಗೆ ಪ್ರಶ್ನೆಗಳೇ ಇಲ್ಲ. ಸಿದ್ದರಾಮಯ್ಯ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿದೆ. ಹೈಕಮಾಂಡ್ ಎಲ್ಲಾದರೂ ಸಿದ್ದರಾಮಯ್ಯ ಬೇಡ ಎಂದು ಹೇಳಿದ್ಯಾ? ಇಲ್ಲ ತಾನೇ.?. ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ. ಹೈಕಮಾಂಡ್‌ಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಗೊಂದಲ ಎಂದು ಅನ್ನಿಸಿಲ್ಲ. ಹೈಕಮಾಂಡ್ ತನ್ನ ಅಗತ್ಯ ಇದ್ದಾಗ ಮಾತನಾಡುತ್ತದೆ. ಹೈಕಮಾಂಡ್ ಸುಮ್ಮನಿದೆ ಎಂದರೇ ಅದರಲ್ಲಿ ಬದಲಾವಣೆಗಳು ಇಲ್ಲ ಎಂದು ಅರ್ಥ. ಪಕ್ಷದಲ್ಲಿ ಒಬ್ಬೊಬ್ಬರು ತಮ್ಮ ತಮ್ಮ ಅಭಿಪ್ರಾಯ ಹೇಳಬಹುದು. ಸಿಎಂ ಕುರ್ಚಿಯ ಬಗ್ಗೆ ಗೊಂದಲ ಇದ್ದಿದ್ರೆ ಸಿಎಲ್‌ಪಿ ಸಭೆಯಲ್ಲಿ ಶಾಸಕರು ಕೇಳುತ್ತಿದ್ದರು. ಯಾರು ಕೂಡ ಆ ಬಗ್ಗೆ ಮಾತನಾಡಿಲ್ಲ. ಅಲ್ಲಿಗೆ ಯಾವ ಗೊಂದಲ ಇಲ್ಲ ಎಂದು ಅರ್ಥ ಎಂದು ಹೇಳಿದರು.

ಇನ್ನು ನಮ್ಮ ತಂದೆಯೇ ಐದು ವರ್ಷ ಸಿಎಂ ಎಂಬ ಎಂಎಲ್‌ಸಿ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅದು ಅವರ ವೈಯಕ್ತಿಕ ಹೇಳಿಕೆ. ಯತೀಂದ್ರ ಯಾವ ಮಾಹಿತಿ ಪಡೆದು ಹೇಳಿದ್ದಾರೆ ಗೊತ್ತಿಲ್ಲ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಮಾಧ್ಯಮಗಳು ಗೊಂದಲ ಎಂದು ಹೇಳುತ್ತಿವೆ ಅಷ್ಟೇ. ಮೊನ್ನೆ ನಡೆದ ಸಭೆಯಲ್ಲೂ ಯಾರು ಏನು ಹೇಳಿಲ್ಲ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಸಿಎಂ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

31 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

3 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

7 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

7 hours ago