ಮೈಸೂರು ನಗರ

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.

ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಶ್ರೀ ಅಗ್ನಿ ಬನ್ನಿರಾಯ ಜಯಂತೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ, ಕರ್ನಾಟಕ ಕಲಾಮಂದಿರದ ಆವರಣದ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಅಗ್ನಿ ಬನ್ನಿರಾಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಅಗ್ನಿ ಬನ್ನಿ ದೇವರಾಯರು ಕ್ಷತ್ರಿಯರ ಆರಾಧ್ಯದೈವ ಮಾತ್ರವಲ್ಲದೆ, ಶ್ರಮಜೀವಿಗಳ ಸಂಕೇತವೂ ಹೌದು. ಜೀವನದಲ್ಲಿ ಯಶಸ್ವಿಯಾಗಲು ಶ್ರಮ ಅತಿ ಮುಖ್ಯ ಎಂದರು.

ಒಬ್ಬ ವ್ಯಕ್ತಿ ತನ್ನ ಪರಿಶ್ರಮದ ಮೂಲಕ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಪ್ರಗತಿ ಸಾಧಿಸಬಹುದು ಎಂಬುದಕ್ಕೆ ಅಗ್ನಿ ಬನ್ನಿ ದೇವರಾಯರ ಜೀವನವೇ ಸಾಕ್ಷಿ. ಅವರ ಆದರ್ಶಗಳನ್ನು, ನುಡಿಗಳನ್ನು ಹಾಗೂ ಅವರು ತೋರಿದ ಮಾರ್ಗವನ್ನು ನಾವು ಪಾಲಿಸದಿದ್ದರೆ ನಮ್ಮ ಜೀವನ ಅಸ್ತವ್ಯಸ್ತವಾಗುತ್ತದೆ ಎಂದು ತಿಳಿಸಿದರು.

ಮಹನೀಯರ ಆದರ್ಶ, ಅವರು ನಡೆದ ಬಂದ ಹಾದಿ, ವಚನಗಳು ಹಾಗೂ ಸಮಾಜಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸುವ ಮತ್ತು ಪ್ರಸ್ತುತ ಪೀಳಿಗೆಗೆ ಅವುಗಳನ್ನು ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಇಂತಹ ಜಯಂತಿಗಳನ್ನು ಆಚರಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಅಗ್ನಿಬನ್ನಿ ರಾಯ ಜಯಂತೋತ್ಸವ ಸಮಿತಿಯ ಪದಾಧಿಕಾರಿಗಳಾದ ಶಿವಣ್ಣ, ಶಾಂತೇಗೌಡ, ರಾಮೇಗೌಡ, ಹುಚ್ಚೇಗೌಡ, ವೆಂಕಟೇಶ್, ಲತಾ ರಂಗಸ್ವಾಮಿ, ವೀಣಾ ಸಿದ್ದೇಶ್, ಮಲ್ಲೇಶ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ. ಡಿ. ಸುದರ್ಶನ್ ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

3 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

3 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

3 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

3 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

3 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

4 hours ago