ಮೈಸೂರು: ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿನ್ಸೆಸ್ ರಸ್ತೆ ಅರಮನೆಗೆ ಸಂಬಂಧಪಟ್ಟಿಲ್ಲ. ಸಮಾಜದ ಹಿತಕ್ಕಾಗಿ ಪ್ರಿನ್ಸೆಸ್ ರಸ್ತೆ ಎಂದು ಹೆಸರಿದೆ. ಈ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದು ಸೂಕ್ತವಲ್ಲ. ಹೀಗಾಗಿ ಸಿದ್ದರಾಮಯ್ಯ ಹೆಸರಿಡುವುದು ಬೇಡ ಎಂದರು.
ಇನ್ನು ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ನೀತಿ ನಿಯಮಗಳಿಗೆ ಅನುಸಾರ ಕೆಲಸ ಮಾಡಲಿ. ಅವರದ್ದೇ ಆದ ಇತಿಹಾಸ ಸೃಷ್ಟಿಸಿದರೆ ಅದು ತಪ್ಪು ಎಂದು ವಾಗ್ದಾಳಿ ನಡೆಸಿದರು.
ಇನ್ನು ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಹಾಲು, ಪೆಟ್ರೋಲ್, ಬಸ್ ದರ ಏರಿಕೆ ಆಗಿದೆ. ಪಂಚ ಗ್ಯಾರಂಟಿಗಳಿಂದಲೇ ವಿಧಾನಸಭೆ ಚುನಾವಣೆ ಗೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಳ್ಳಲೇಬೇಕು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೇರೆ ಬೇರೆ ಕಡೆಯಿಂದ ಹಣ ಉತ್ಪಾದನೆ ಮಾಡುತ್ತಿದ್ದು, ಕಾರಣಾಂತರಗಳಿಂದ ಈ ರೀತಿ ಮಾಡಲಾಗುತ್ತಿದೆ. ಆರ್ಥಿಕ ದೃಷ್ಟಿಯಿಂದ ಎಲ್ಲವನ್ನೂ ಪರಿಶೀಲನೆ ಮಾಡಿ, ಸಮಾಜದ ಹಿತಕ್ಕಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…
ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…