ಮೈಸೂರು: ಕೆಆರ್ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿನ್ಸೆಸ್ ರಸ್ತೆ ಅರಮನೆಗೆ ಸಂಬಂಧಪಟ್ಟಿಲ್ಲ. ಸಮಾಜದ ಹಿತಕ್ಕಾಗಿ ಪ್ರಿನ್ಸೆಸ್ ರಸ್ತೆ ಎಂದು ಹೆಸರಿದೆ. ಈ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದು ಸೂಕ್ತವಲ್ಲ. ಹೀಗಾಗಿ ಸಿದ್ದರಾಮಯ್ಯ ಹೆಸರಿಡುವುದು ಬೇಡ ಎಂದರು.
ಇನ್ನು ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ನೀತಿ ನಿಯಮಗಳಿಗೆ ಅನುಸಾರ ಕೆಲಸ ಮಾಡಲಿ. ಅವರದ್ದೇ ಆದ ಇತಿಹಾಸ ಸೃಷ್ಟಿಸಿದರೆ ಅದು ತಪ್ಪು ಎಂದು ವಾಗ್ದಾಳಿ ನಡೆಸಿದರು.
ಇನ್ನು ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಹಾಲು, ಪೆಟ್ರೋಲ್, ಬಸ್ ದರ ಏರಿಕೆ ಆಗಿದೆ. ಪಂಚ ಗ್ಯಾರಂಟಿಗಳಿಂದಲೇ ವಿಧಾನಸಭೆ ಚುನಾವಣೆ ಗೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಳ್ಳಲೇಬೇಕು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೇರೆ ಬೇರೆ ಕಡೆಯಿಂದ ಹಣ ಉತ್ಪಾದನೆ ಮಾಡುತ್ತಿದ್ದು, ಕಾರಣಾಂತರಗಳಿಂದ ಈ ರೀತಿ ಮಾಡಲಾಗುತ್ತಿದೆ. ಆರ್ಥಿಕ ದೃಷ್ಟಿಯಿಂದ ಎಲ್ಲವನ್ನೂ ಪರಿಶೀಲನೆ ಮಾಡಿ, ಸಮಾಜದ ಹಿತಕ್ಕಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಮೈಸೂರು: ಸಿದ್ದರಾಮಯ್ಯ ಮತ್ತು ಮಹದೇವಪ್ಪ ನಡುವೆ ಮುನಿಸು ಮೂಡಿದೆ ಎಂಬ ವರದಿಗಳಿಗೆ ಸಂಸದ ಸುನಿಲ್ ಬೋಸ್ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಇಬ್ಬರದ್ದು…
ನವದೆಹಲಿ: ನಿಮ್ಮ ಖಾಸಗಿ ಕಾರು ಅಥವಾ ಬೈಕ್ ಬಿಎಸ್-6 ಮಾದರಿಯದ್ದೇ? ಹಾಗಿದ್ದರೆ ಮಾಲಿನ್ಯ ತಪಾಸಣೆಯ ಅವಧಿಯಲ್ಲಿ ನಿಮಗೊಂದು ಸಿಹಿಸುದ್ದಿ ಇದೆ.…
ಬೆಂಗಳೂರು: ಕರ್ನಾಟಕದಲ್ಲಿ ಇನ್ನೆರಡು ದಿನ ಚಳಿ ಹೆಚ್ಚಾಗುವ ಸಾಧ್ಯತೆಯಿದೆ. ನವೆಂಬರ್ 20ರ ಹವಾಮಾನ ವರದಿ ಪ್ರಕಾರ, ರಾಜ್ಯದ ಬಯಲು ಪ್ರದೇಶಗಳ ಪೈಕಿ…
ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೆ ರಾಜಕೀಯ ಉದ್ವಿಗ್ನತೆ ಭುಗಿಲೆದ್ದಿದೆ. ಅವಾಮಿ ಲೀಗ್ ಕರೆ ನೀಡಿದ್ದ ಪ್ರತಿಭಟನೆಗೂ ಮುನ್ನ ನಡೆದ ಘರ್ಷಣೆಗಳಲ್ಲಿ ನಾಲ್ವರು…
ಒಡಿಶಾ: ‘ಅಕ್ವಾನ್’ ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾದಲ್ಲಿ 1 ಲಕ್ಷ 20 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಚಂಡಮಾರುತದ…
ಮಂಡ್ಯ : ಹಸು ಮೇಯಿಸಲು ಆರಣ್ಯದಂಚಿಗೆ ತೆರಳಿದ್ದ ವೃದ್ಧರೊಬ್ಬರ ಮೇಲೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದ ಪರಿಣಾ ಮ ಅವರು…