ಮೈಸೂರು ನಗರ

ಪ್ರಿನ್ಸೆಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರ: ಸಿಎಂ ಪರ ಬ್ಯಾಟ್ ಬೀಸಿದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ನಗರದ ಪಿಕೆಟಿಬಿ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು, ಇದೀಗ ಸಿಎಂ ಪರ ಶಾಸಕ ಜಿ.ಟಿ.ದೇವೇಗೌಡ ಬ್ಯಾಟ್‌ ಬೀಸಿದ್ದಾರೆ.

ಅರಮನೆ ಆವರಣದಲ್ಲಿ ಇಂದು(ಡಿಸೆಂಬರ್‌.28) ಆಯೋಜಿಸಲಾಗಿದ್ದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಪ್ರಿನ್ಸೆಸ್‌ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಿಕೆಟಿಬಿ ರಸ್ತೆಗೆ ಪ್ರಿನ್ಸೆಸ್‌ ರಸ್ತೆ ಎಂದು ನಾಮಕರಣ ಮಾಡಿಲ್ಲ ಎನ್ನುವುದಾದರೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂಬ ಹೆಸರು ನಾಮಕರಣ ಮಾಡಿರುವುದರೇ ತಪ್ಪೇನಿಲ್ಲ ಎಂದಿದ್ದಾರೆ.

ಈ ರಸ್ತೆಯ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆ ಬಗ್ಗೆ ನನಗೆ ಗೊತ್ತಿಲ್ಲ, ಆದರೆ ಸಂಸದ ಯದುವೀರ್‌ ಹೇಳುವಂತೆ ಕೆಆರ್‌ಎಸ್‌ ರಸ್ತೆಗೆ ಪ್ರಿನ್ಸೆಸ್‌ ರಸ್ತೆ ಎಂದು ನಾಮಕರಣ ಮಾಡಲಾಗಿದೆ ಎಂದು ಹೇಳುತ್ತಾರೆ. ಅಲ್ಲದೇ ಇನ್ನೂ ಕೆಲವರು ಆ ರಸ್ತೆಗೆ ಯಾವ ಹೆಸರನ್ನು ಇಟ್ಟಿಲ್ಲ ಎಂದು ಹೇಳುತ್ತಾರೆ. ಹೀಗಾಗಿ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡಿದರೆ ತಪ್ಪೇನಿಲ್ಲ ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

45 mins ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

51 mins ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

58 mins ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

1 hour ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

9 hours ago