ಮೈಸೂರು ನಗರ

ಮೈಸೂರು ನಗರದಲ್ಲಿ ಹಳೆ ಬಸ್‌ಗಳ ಸಂಚಾರ ವಿಚಾರ: ಸಾರಿಗೆ ಇಲಾಖೆ ಪ್ರಾದೇಶಿಕ ಅಧಿಕಾರಿ ವಸಂತ್ ಚೌವ್ಹಾಣ್‌ ಪ್ರತಿಕ್ರಿಯೆ

ಮೈಸೂರು: ಬೆಂಗಳೂರು ಡಿಜಿಸ್ಟ್ರೇಷನ್‌ ಹಳೆಯ ಬಸ್‌ಗಳು ಮೈಸೂರು ನಗರದಲ್ಲಿ ಸಂಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವಸಂತ್ ಚೌವ್ಹಾಣ್‌ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು ನಗರದಲ್ಲಿ ಹಳೆಯ ಬಸ್‌ಗಳು ಹೊಸ ಸೂಸುತ್ತಿದ್ದ ಬಗ್ಗೆ ಆಂದೋಲನ ಸುದ್ದಿ ಮಾಡಿತ್ತು. ಈ ಬಗ್ಗೆ ಮಾತನಾಡಿರುವ ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವಸಂತ್ ಚೌವ್ಹಾಣ್‌ ಅವರು, ಹೊಗೆ ಸೂಸುತ್ತಿರುವ ಬಸ್‌ಗಳನ್ನು ಪರಿಶೀಲಿಸುತ್ತೇವೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಗಮನಿಸಿದ್ದೇನೆ. ಈ ನಿಮ್ಮ ಸಲಹೆ ಮೇರೆಗೆ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.

ಇನ್ನು ಚಿತ್ರದುರ್ಗದಲ್ಲಿ ಸ್ಲೀಪರ್ ಬಸ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಮೈಸೂರಿನ ಆರ್‌ಟಿಓ ಅಧಿಕಾರಿಗಳು ಫುಲ್‌ ಅಲರ್ಟ್‌ ಆಗಿದ್ದಾರೆ. 60ಕ್ಕೂ ಹೆಚ್ಚು ಸ್ಲೀಪರ್ ಬಸ್‌ಗಳನ್ನು ತಪಾಸಣೆ ಮಾಡಲಾಗಿದ್ದು, ಈ ಪೈಕಿ 16 ಪ್ರಕರಣ ದಾಖಲಾಗಿದೆ. ಬಸ್‌ಗಳಲ್ಲಿ ಅಳವಡಿಸಿರುವ ಸುರಕ್ಷತಾ ಪರಿಕರಗಳನ್ನು ಕೂಡ ತಪಾಸಣೆ ನಡೆಸಲಾಗುತ್ತಿದೆ. ಸಾರಿಗೆ ಸಚಿವರ ಸೂಚನೆ ಮೇರೆಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಬಸ್‌ಗಳನ್ನು ತಪಾಸಣೆ ಮಾಡ್ತಿದ್ದೇವೆ. ಈ ಸಂಬಂಧ 16 ಪ್ರಕರಣಗಳನ್ನು ದಾಖಲು ಮಾಡಿದ್ದೇವೆ ಎಂದು ಹೇಳಿದರು.

ಇನ್ನು ಅಪಘಾತ ಪ್ರಕರಣಗಳಲ್ಲಿ ಮೈಸೂರು ಇಡೀ ರಾಜ್ಯದಲ್ಲಿ 6 ನೇ ಸ್ಥಾನದಲ್ಲಿದೆ. ಅಪಘಾತ ಪ್ರಕರಣದಲ್ಲಿ ಕಳೆದ 5 ವರ್ಷದಲ್ಲಿ ಮೈಸೂರು ಟಾಪ್ 10ರ ಒಳಗಿದ್ದು, ಕಳೆದ ಸಾಲಿನಲ್ಲಿ 6ನೇ ಸ್ಥಾನದಲ್ಲಿದೆ. ಹೀಗಾಗಿ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ರಸ್ತೆ ಸುರಕ್ಷತಾ ಮಾಸಾಚರಣೆ ಹಮ್ಮಿಕೊಳ್ಳುತ್ತಿದ್ದೇವೆ. ಈ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ವಾಹನ ಸವಾರರಿಗೆ ಮನವರಿಕೆ ಮಾಡಿಕೊಡ್ತೇವೆ ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

51 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

53 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

55 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

58 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago