ಮೈಸೂರು ನಗರ

ರಸ್ತೆ ಅಪಘಾತ ಸಂಖ್ಯೆ ಶೂನ್ಯವಾಗಬೇಕು : ನಿ.ನ್ಯಾಯಮೂರ್ತಿ ಅಭಯ್‌ ಮನೋಹರ್‌ ಸಪ್ರೆ

ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷ ಅಭಯ್ ಮನೋಹರ್ ಸಪ್ರೆ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುದ್ಧಗಳು ಉದ್ದೇಶಪೂರಿತವಾಗಿ ನಡೆದು ಹಲವರು ಜನರು ಸವಾನ್ನಪ್ಪುತ್ತಾರೆ. ರಸ್ತೆ ಅಪಘಾತದಲ್ಲಿ ಯಾವುದೇ ಉದ್ದೇಶವಿಲ್ಲದೆ ಅಂದಾಜು ದೇಶದಲ್ಲಿ ಪ್ರತಿ ವರ್ಷ ಅಂದಾಜು 2 ಲಕ್ಷ ಜನರು ಮರಣ ಹೊಂದುತ್ತಾರೆ ಎಂದರೆ ಇದು ಚಿಂತಿಸುವ ವಿಷಯವಾಗಿದೆ ಎಂದರು.

ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸದೇ ಇರುವುದು, ಅತಿ ವೇಗವಾಗಿ ವಾಹನ ಚಾಲನೆ ಮಾಡುವುದು ರಸ್ತೆ ಅಪಘಾತ ಹಾಗೂ ರಸ್ತೆ ಅಪಘಾತದ ಮರಣಕ್ಕೆ ಮುಖ್ಯ ಕಾರಣವಾಗಿರುತ್ತದೆ. ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸಬೇಕು ಎಂಬುವುದು ಸಾಮಾನ್ಯ ಜ್ಞಾನ ಇದಕ್ಕೆ ಯಾವುದೇ ಪದವಿ ಬೇಡ. ಹೆಚ್ಚು ವಿದ್ಯಾವಂತರು ಸಹ ಸೀಟ್ ಬೆಲ್ಟ್ ಹಾಗೂ ಹೆಲ್ಮೆಟ್ ಧರಿಸದೇ ರಸ್ತೆ ಅಪಘಾತದಲ್ಲಿ ಮರಣ ಹೊಂದಿರುವ ಉದಾಹರಣೆಗಳಿವೆ. ಸಾರ್ವಜನಿಕರು ಕಡ್ಡಾಯವಾಗಿ ಸಂಚಾರಿ ನಿಯಮ ಪಾಲನೆ ಮಾಡುವ ರೀತಿ ಮನಸ್ಥಿತಿ ಬದಲಾವಣೆ ಮಾಡಬೇಕು. ಇದಕ್ಕೆ ಇರುವ ದಾರಿ ಎಂದರೆ ಒಂದು ಜಾಗೃತಿ ಮೂಡಿಸುವುದು ಇನ್ನೊಂದು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಾಗಿ ಸಂಚಾರಿ ನಿಯಮಗಳನ್ನು ಜಾರಿಗೊಳಿಸುವುದು ಎಂದರು.

ಕಳೆದ 5 ವರ್ಷಗಳಿಂದ ಹೆಚ್ಚು ರಸ್ತೆ ಅಫಘಾತಗಳ ಸಂಖ್ಯೆಯಲ್ಲಿ ಕರ್ನಾಟಕ ರಾಜ್ಯ 5 ನೇ ಸ್ಥಾನ ಹಾಗೂ ಮೈಸೂರು ಜಿಲ್ಲೆ 10 ನೇ ಸ್ಥಾನದೊಳಗಿದೆ. ರಸ್ತೆ ನಿರ್ಮಾಣದ ಸಂದರ್ಭದಲ್ಲಿ ಗುಣಮಟ್ಟದ ಬಗ್ಗೆ ಹಾಗೂ ಮುಂದಿನ ದಿನಗಳಲ್ಲಿ ರಸ್ತೆ ಗುಂಡಿಗಳು ಮತ್ತು ಬ್ಲ್ಯಾಕ್ ಸ್ಪಾಟ್ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.

ಇದನ್ನೂ ಓದಿ:-ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಮೈಸೂರು ಜಿಲ್ಲೆ ಪ್ರವಾಸಿ ತಾಣವಾಗಿದ್ದು, ಖಾಸಗಿ ಬಸ್ ಗಳ ಸಂಚಾರ ಹೆಚ್ಚಿರುತ್ತದೆ. ಖಾಸಗಿ ಬಸ್ ಗಳು ಉತ್ತಮ ಸ್ಥಿತಿಯಲ್ಲಿರುವ ಬಗ್ಗೆ ಹಾಗೂ ಸರ್ಕಾರ ವಿಧಿಸಿರುವ ನಿಯಮಗಳ ಪಾಲನೆ, ವಾಹನ ಚಾಲಕರ ಪರವಾನಗಿ ಹಾಗೂ ವಾಹನ ವಿಮೆಯ ಬಗ್ಗೆ ನಿಗದಿತವಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು‌ ಎಂದರು.

ನಗರ ಪ್ರದೇಶಗಳಿಕ್ಕಿಂತ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ರಸ್ತೆ ಅಪಘಾತವಾಗಿ ಜನರು‌ ಮರಣ ಹೊಂದುತ್ತಾರೆ. ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶದಲ್ಲೂ ಆಯೋಜಿಸಬೇಕು. ಜಾಗೃತಿ ಮೂಡಿಸಲು ಹೆಚ್ಚಿನ ಜನರನ್ನು ಆಕರ್ಷಿಸುವ ರೀತಿ ತಾಂತ್ರಿಕ ಸಂಚಾರಿ ಪಾಕ್೯ ( technical traffic park) ನಿರ್ಮಿಸಿ ಸಂಚಾರಿ ನಿಯಮಗಳನ್ನು ತಿಳಿಸಿ ಎಂದರು.

ಸರ್ಕಾರಿ ಕಚೇರಿಗಳು, ದೊಡ್ಡ ಕಂಪನಿಗಳು ಶಾಲಾ ಕಾಲೇಜುಗಳಿಗೆ ಬರುವ ದ್ವಿಚಕ್ರ ವಾಹನಗಳಲ್ಲಿ ಬರುವ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಪ್ರತಿದಿನ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸಭೆ ನಡೆಸಿ ಮುಖ್ಯಸ್ಥರಿಗೆ ತಿಳಿಸಿ ಹೆಲ್ಮೆಟ್ ಧರಿಸುವುದನ್ನು ರೂಢಿಸುವ ಪ್ರಯತ್ನ ಮಾಡಿ ಎಂದರು.

ಜಿಲ್ಲಾಧಿಕಾರಿ ಲಜ್ಷ್ಮೀಕಾಂತ ರೆಡ್ಡಿ ಜಿ ಅವರು 2020 ರಿಂದ 2025 ರವರೆಗೆ ಜಿಲ್ಲೆಯಲ್ಲಿ ಸಂಭವಿಸಿರುವ ರಸ್ತೆ ಅಪಘಾತಗಳು, ಮರಣ ಹೊಂದಿದವರ ಸಂಖ್ಯೆ, ಗುರುತಿಸಿರುವ ಬ್ಲ್ಯಾಕ್ ಸ್ಪಾಟ್ ಗಳು ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಟ್ಕಾರ್ ಅವರು ಮೈಸೂರು ನಗರ ಪ್ರದೇಶದ ಮುಖ್ಯ ಭಾಗಗಳಲ್ಲಿ ಅಳವಡಿಸಿರುವ ಕ್ಯಾಮರಾಗಳು ಹಾಗೂ ಹೆಚ್ಚಿನ ಅಪಘಾತಗಳಾಗುವ ರಸ್ತೆಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

3 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

11 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

11 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

11 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

11 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

11 hours ago