ಮೈಸೂರು ನಗರ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಇಂದು ಎರಡನೇ ತಂಡದ ಗಜಪಡೆ ಆಗಮನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಸಂಜೆಯ ವೇಳೆಗೆ ಎರಡನೇ ತಂಡದ ಗಜಪಡೆ ಮೈಸೂರಿಗೆ ಆಗಮಿಸಲಿವೆ.

ಈಗಾಗಲೇ ಮೊದಲನೇ ತಂಡದ 9 ಆನೆಗಳು ಮೈಸೂರಿನ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದು, ಬೆಳಿಗ್ಗೆ ಹಾಗೂ ಸಂಜೆ ತಾಲೀಮು ನಡೆಸುತ್ತಿವೆ. ಇಂದು ಸಂಜೆಯ ವೇಳೆಗೆ ಎರಡನೇ ತಂಡದ ಐದು ಆನೆಗಳು ಮೈಸೂರಿಗೆ ಆಗಮಿಸಲಿದ್ದು, ದಸರಾ ಮಹೋತ್ಸವ ಇಂದಿನಿಂದ ಮತ್ತಷ್ಟು ರಂಗೇರಲಿದೆ.

ಮತ್ತಿಗೋಡು ಶಿಬಿರದಿಂದ ಶ್ರೀಕಂಠ (56), ಭೀಮನಕಟ್ಟೆ ಆನೆ ಶಿಬಿರದಿಂದ ರೂಪ (44), ದುಬಾರಿ ಆನೆ ಶಿಬಿರದಿಂದ ಗೋಪಿ (42), ಸುಗ್ರೀವ (43) ಹಾಗೂ ಹೇಮಾವತಿ (11) ಆನೆಗಳು ಇಂದು ಸಂಜೆ 4 ಗಂಟೆ ಸುಮಾರಿಗೆ ಅರಮನೆ ಆವರಣಕ್ಕೆ ಎಂಟ್ರಿಯಾಗಲಿವೆ.

ನಾಳೆಯಿಂದ ಒಟ್ಟು 14 ಆನೆಗಳು ತಾಲೀಮು ನಡೆಸಲಿದ್ದು, ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಎಲ್ಲಾ ರೀತಿಯಲ್ಲೂ ಸಿದ್ಧತೆ ನಡೆಸಲಿವೆ.

ಇನ್ನು ಮೈಸೂರು ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದು, ಈ ಬಾರಿ ಅದ್ಧೂರಿ ದಸರಾ ನಡೆಯಲಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಕೂಡ ದಸರಾದ ರೂಪುರೇಷೆಗಳನ್ನು ತಯಾರು ಮಾಡಿಕೊಂಡಿದೆ.

ಈಗಾಗಲೇ ದಸರಾ ಉದ್ಘಾಟಕರ ಹೆಸರು ಕೂಡ ಘೋಷಣೆಯಾಗಿದ್ದು, ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

11 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

12 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

12 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

12 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

12 hours ago