ಮೈಸೂರು ನಗರ

ರಾಜ್ಯ ಸರ್ಕಾರಕ್ಕೆ ಜನಪರ ಕಾಳಜಿಯಿಲ್ಲ: ಬಿ.ವೈ.ವಿಜಯೇಂದ್ರ

ಪ್ರಶಾಂತ್‌ ಎನ್‌ ಮಲ್ಲಿಕ್‌

ಮೈಸೂರು: ರಾಜ್ಯ ಸರ್ಕಾರ ಇಲ್ಲಿಯವರೆಗೂ ಒಂದೂ ಜನಪರ ಕೆಲಸ ಮಾಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಜನಾಕ್ರೋಶ ಯಾತ್ರೆ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಮೇಕೆದಾಟು ಸೇರಿದಂತೆ ಹಲವು ಹೋರಾಟ ಮಾಡಿತ್ತು. ಅಧಿಕಾರಕ್ಕೆ ಬಂದ ಬಳಿಕ ಎಲ್ಲವನ್ನು ಮರೆತುಬಿಟ್ಟಿದೆ. ಸರ್ಕಾರ ಇಲ್ಲಿಯವರೆಗೂ ಒಂದು ಜನಪರ ಕೆಲಸ ಮಾಡಲಿಲ್ಲ. ಎಷ್ಟು ವರ್ಷ ಅಧಿಕಾರ ನಡೆಸಿದರು ಎನ್ನುವುದು ಮುಖ್ಯವಲ್ಲ, ಬದಲಿಗೆ ಜನರಿಗೆ ಏನೇನು ಕೊಡುಗೆ ನೀಡಿದ್ದಾರೆ ಎಂಬುದು ಮುಖ್ಯ ಎಂದರು.

ಇನ್ನು ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡಿ ಮೈಸೂರು ಜಿಲ್ಲೆಯನ್ನು ಅಭಿವೃದ್ಧಿಪಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದುಕಿದ್ದು ಸತ್ತಂತೆ ಆಗಿದೆ. ಹಾಲು, ಪೆಟ್ರೊಲ್, ಡೀಸೆಲ್ ಬೆಲೆಯನ್ನು ನಿರಂತರ ಏರಿಕೆ ಮಾಡಲಾಗುತ್ತಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಪರಿಣಾಮ ಜನಸಾಮಾನ್ಯರು ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು ಬಸ್‌ಗಳ ಸಮಸ್ಯೆ ಎದುರಿಸುವ ಪರಿಸ್ಥಿತಿ ಬಂದಿದೆ. ರಾಜ್ಯ ಸರ್ಕಾರಕ್ಕೆ ಜನಪರ ಕಾಳಜಿ ಇಲ್ಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

 

ಆಂದೋಲನ ಡೆಸ್ಕ್

Recent Posts

ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲಿ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್‌ ಸೇಠ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…

1 hour ago

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಅಕ್ರಮ ತಡೆಗೆ ಹದ್ದಿನ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್‌ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…

1 hour ago

ರಾಮನಗರ| ಜಿಮ್‌ ಟ್ರೇನರ್‌ಗೆ ಪ್ರೇಯಸಿಯಿಂದಲೇ ಚಾಕು ಇರಿತ

ರಾಮನಗರ: ಜಿಮ್‌ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…

2 hours ago

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ರಿಲೀಫ್‌

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…

2 hours ago

ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…

2 hours ago

ಹೈಕೋರ್ಟ್‌ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…

2 hours ago