ಮೈಸೂರು: ಧರ್ಮಸ್ಥಳ ವಿಚಾರವಾಗಿ ಎಸ್‌ಐಟಿ ತನಿಖೆ ಮಾಡಿಸಿ ಸತ್ಯ ಹೊರ ಬರುವಂತೆ ಮಾಡಿದ್ದೇವೆ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮದು ಬಿಜೆಪಿ, ಜೆಡಿಎಸ್ ರೀತಿ ರಾಜಕೀಯ ಪ್ರೇರಿತ ಯಾತ್ರೆಯಲ್ಲ. ನಾವು ಮಾಡುತ್ತಿರುವುದು ಧರ್ಮ ವಿಜಯ ಯಾತ್ರೆ. ಧರ್ಮಸ್ಥಳ ವಿಚಾರವಾಗಿ ಎಸ್‌ಐಟಿ ತನಿಖೆ ಮಾಡಿಸಿ ಸತ್ಯ ಹೊರ ಬರುವಂತೆ ಮಾಡಿದ್ದೇವೆ. ಆ ಮೂಲಕ ಶ್ರೀಕ್ಷೇತ್ರದ ಮೇಲೆ ಇದ್ದ ಕಳಂಕ ದೂರು ಮಾಡುವ ಕೆಲಸ ಮಾಡಿದ್ದೇವೆ.
ಇದನ್ನು ಓದಿ: ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಕೊಡುವುದಿಲ್ಲ: ಸಚಿವ ಪರಮೇಶ್ವರ್ ಸ್ಪಷ್ಟನೆ
ಈಗಾಗಿ ನಮ್ಮದು ನಿಜವಾದ ಧರ್ಮಯಾತ್ರೆ. ನಾವೆಲ್ಲರೂ ಶಿವನ ಆರಾಧಕರು. ಇಲ್ಲಿಂದ ತೆರಳಿ ಒಂದು ದಿನ ತಂಗಿದ್ದು, ನಾಳೆ ದರ್ಶನ ಮಾಡಿ ಬರುತ್ತೇವೆ. ಈಗಾಗಲೇ ಧರ್ಮಾಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಅಲ್ಲಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ನಮ್ಮ ಪಕ್ಷದ ಒಪ್ಪಿಗೆ ಕೂಡ ಇದೆ. ನಮ್ಮ ಪಕ್ಷ ಧರ್ಮಾತೀತವಾದದ್ದು. ಹಿಂದೂ, ಮುಸ್ಲಿಂ, ಬೌದ್ಧ ಸೇರಿ ಎಲ್ಲಾ ಧರ್ಮವನ್ನು ಆರಾಧಿಸುತ್ತೇವೆ. ಕ್ಷೇತ್ರದಲ್ಲಿರುವ ಧರ್ಮಸ್ಥಳ ಭಕ್ತಾಧಿಗಳ ಭಾವನೆಗೆ ಸ್ಪಂದಿಸಿ ಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು.





