ಮೈಸೂರು: ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಮೈಸೂರಿನ ಎಪಿಎಂಸಿಯಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಕಳೆದ ತಡರಾತ್ರಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ.
ಅಂಗಡಿಯ ಶಟರ್ ಮುರಿದು ಒಳಗೆ ನುಗ್ಗಿರುವ ಖದೀಮರು, ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಕಳ್ಳರ ಚೈಚಳಕ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಳೆದ ವಾರವಷ್ಟೇ ಎಪಿಎಂಸಿಯಲ್ಲಿ ಕಳ್ಳತನ ನಡೆದಿತ್ತು. ಆದರೆ ಕಳೆದ ತಡರಾತ್ರಿಯೂ ಕಳ್ಳರು ಕೈಚಳಕ ತೋರಿಸಿದ್ದಾರೆ. ಪರಿಣಾಮ ಒಂದು ವಾರದಲ್ಲೇ ಸುಮಾರು 20 ಅಂಗಡಿಗಳಿಗೆ ಖನ್ನ ಹಾಕಿರುವ ಖದೀಮರು, ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.
ಈ ಸಂಬಂಧ ಮೈಸೂರಿನ ದಕ್ಷಿಣ ಉಪವಿಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.





