ಮೈಸೂರು ನಗರ

ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲೂ ಹಸುಗಳ ಕಳ್ಳತನ ನಡೆಯುತ್ತಿದೆ ಎಂದ ಎಲ್.ನಾಗೇಂದ್ರ

ಮೈಸೂರು: ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲಿ ಹಸುಗಳ ಕಳ್ಳತನ ಆಗುತ್ತಿದೆ ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ಆರೋಪ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಹರಕೆಯ ಗೂಳಿಯ ಬಾಲ ಕತ್ತರಿಸಿರುವುದು ಹೇಯ ಕೃತ್ಯ. ಈ ಮೂಲಕ ಜನರ ಭಾವನೆಗಳನ್ನು ಕತ್ತರಿಸುವ ಕೆಲಸ ಆಗುತ್ತಿದೆ ಎಂದು ಕಿಡಿಕಾರಿದರು.

ಇನ್ನು ಘಟನೆಗೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ಕಿಡಿಕಾರಿದ ನಾಗೇಂದ್ರ ಅವರು, ಇಂತಹ ಘಟನೆಗಳನ್ನು ತಪ್ಪಿಸುವಲ್ಲಿ ಪೊಲೀಸ್‌ ಇಲಾಖೆ ಸಂಪೂರ್ಣ ವಿಫಲವಾಗಿದೆ. ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲೇ ಹಲವು ಹಸುಗಳನ್ನು ಕಳ್ಳತನ ಮಾಡಲಾಗಿದೆ. ಅನೇಕ ಹಸುಗಳನ್ನು ಕದ್ದು, ಕೊಲ್ಲುವ ಕೆಲಸ ಮಾಡಲಾಗುತ್ತಿದೆ. ಇನ್ನು ಮುಂದಾದರೂ ಇಂತಹ ಘಟನೆಗಳು ನಡೆಯದಂತೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರಲ್ಲಿ ಡ್ರಗ್ಸ್‌ ಪತ್ತೆ | ಸರ್ಕಾರ, ಪೊಲೀಸ್‌ ಮತ್ತೇ ವಿಫಲ ; ಯದುವೀರ್‌ ಅಸಮಾಧಾನ

ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…

1 min ago

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪ್ರಮಾಣ ವಚನ

ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…

21 mins ago

ದಂಟಳ್ಳಿ ಯೋಜನೆಗೆ ಡಿ.ಪಿ.ಆರ್ʼಗೆ ಒತ್ತಾಯಸಿ ಬೃಹತ್‌ ಪ್ರತಿಭಟನೆ

ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…

32 mins ago

ಮೈಸೂರಲ್ಲಿ ಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : ಎನ್‌ಸಿಬಿ ಅಧಿಕೃತ ಮಾಹಿತಿ

ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…

49 mins ago

ಸ್ವತಃ ಎದೆಗೆ ಗುಂಡಿಟ್ಟುಕೊಂಡ ಸಿ.ಜೆ.ರಾಯ್ :‌ ಮರಣೋತ್ತರ ಪರೀಕ್ಷೆಯಲ್ಲಿ ಧೃಢ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…

2 hours ago

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…

2 hours ago