ಮೈಸೂರು ನಗರ

ವಿಷಯ ಪರಿಣಿತರಿಗೆ ವಿದೇಶದಲ್ಲಿ ವಿಪುಲ ಅವಕಾಶ : ದುಬೈ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ಅಭಿಮತ

ಮೈಸೂರು:  ಯಾವುದೇ ವಿಷಯದಲ್ಲಿ ಪರಿಣಿತ ಹೊಂದಿದರಿಗೆ ವಿದೇಶದಲ್ಲಿ ವಿಪುಲ ಅವಕಾಶ ಲಭ್ಯ ಇವೆ ಎಂದು ದುಬೈನ ಖಾಸಗಿ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ರಾಮಚಂದ್ರನ್ ಅಭಿಮತ ವ್ಯಕ್ತಪಡಿಸಿದ್ದಾರೆ.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದಿಂದ ಆಯೋಜಿಸಿದ್ದ ಭಾಷೆ ಬಳಕೆ ಹಾಗೂ ಸಮಕಾಲೀನ ಸಮಾಜದಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆಯ ಒಳಿತು ಕೆಡುಕು ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದಿನ ದಿನಮಾನದಲ್ಲಿ ಹೆಣ್ಣುಮಕ್ಕಳಿಗೆ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶಗಳ ಮಹಾಪೂರವೇ ಇದೆ. ಆದರೆ ಅದಕ್ಕೆ ಅಗತ್ಯವಾದ ಪರಿಣಿತಿ ಅಗತ್ಯವಿದೆ. ಇದ್ದವರಿಗೆ ಅವಕಾಶ ಸಿಗಲಿದೆ. ಹಾಗಾಗಿ ಆ ಪರಿಣಿತಿ ಪಡೆದುಕೊಳ್ಳಿ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ:-ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ : ಶಾಸಕ ಜಿ.ಡಿ ಹರೀಶ್‌ ಗೌಡ

ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಸಂಸ್ಥೆಗಳಿಗಿಂತ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಅವಕಾಶ ಹೆಚ್ಚಾಗಿವೆ. ಅದರಲ್ಲೂ ಕಾನೂನು ವಿಭಾಗದಲ್ಲಿ ಹೇರಳವಾಗಿವೆ. ಆದರಿಂದ ಕಾನೂನು ಅಧ್ಯಯನ ಮಾಡುವ ಮೂಲಕ ಅದರ ಅರಿವು ಪಡೆದುಕೊಳ್ಳಿ ಎಂದ ಅವರು, ಮಹಿಳೆಯರಿಗೆ ಕಾನೂನು ಅರಿವು ವೈಯಕ್ತಿಕ ಮತ್ತು ಸಾಮುದಾಯಿಕವಾಗಿ ಸಹಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬದಲಾದ ಕಾಲಮಾನಕ್ಕೆ ತಕ್ಕಂತೆ ಅಂತರ್ಜಾಲ ತಾಣಗಳು ಕುರಿತು ಕಾನೂನು, ಕ್ಲೌಡ್ ಕಾನೂನು, ಡಾಟಾ ಸಂರಕ್ಷಣೆ ಕಾನೂನು ಮತ್ತು ಕೃತಕ ಬುದ್ಧಿಮತ್ತೆ ಕಾನೂನು ಬಗ್ಗೆ ತಿಳಿದುಕೊಳ್ಳಿ ಎಂದು ಹೇಳಿದ ಅವರು, ಇದನ್ನು ಮಾತೃ ಭಾಷೆ ಜತೆಗೆ ಇತರೆ ಅಂದರೆ ಇಂಗ್ಲಿಷ್ ಮತ್ತು ಬೇರೆ ಬೇರೆ ಭಾಷೆಗಳಲ್ಲಿ ಜ್ಞಾನ ಪ್ರಾಪ್ತಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಂತ್ರಜ್ಞಾನದ ಹೊಸ ಆವಿಷ್ಕಾರಗಳ ಜತೆಜತೆಗೆ ಭಾಷೆ ಬದಲಾಗುತ್ತದೆ. ಅಲ್ಲದೇ ಅವುಗಳ ಜತೆಗೇ ತೊಂದರೆಗಳು ಕೂಡ ಅಧಿಕ. ಹಾಗಾಗಿ, ತಂತ್ರಜ್ಞಾನ ಬಳಸಿ ಉನ್ನತೀಕರಿಸಿಕೊಳ್ಳುವ ಜತೆಗೆ ಅಪಾಯದ ಬಗ್ಗೆ ಅರಿತು ಎಚ್ಚರಿಕೆಯಿಂದ ಇರಬೇಕು ಎಂದರು.

ಕಾಲೇಜು ಪ್ರಾಂಶುಪಾಲ ಪ್ರೊ. ಅಬ್ದುಲ್ ರಹಿಮಾನ್ ಎಂ ಅವರು ಮಾತನಾಡಿ, ದುರ್ದಿನಗಳು ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿರುವ ಇಂದು ಹೆಣ್ಣುಮಕ್ಕಳು ಕಾನೂನು ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಸಮಾಜವನ್ನು ಎದುರಿಸುವುದು ಕಷ್ಟ ಆಗಲಿದೆ ಎಂದು ಎಚ್ಚರಿಸಿದರು.

ವಿಭಾಗದ ಮುಖ್ಯಸ್ಥ ಗೋವಿಂದರಾಜು, ಪ್ರಾಧ್ಯಾಪಕ ಡಾ.ಪರಶಿವಮೂರ್ತಿ ಎಚ್.ಎಸ್, ಸಹಪ್ರಾಧ್ಯಾಪಕಿ ಡಾ.ಶೋಭಲತ ಎನ್, ಅಧ್ಯಾಪಕ ರಂಗನಾಥ ಎಚ್.ಎಸ್. ಅಧ್ಯಾಪಕ ದಿನೇಶ್ ಎಚ್.ಆರ್, ಡಾ. ಆನಂದ್ ಎಚ್. ಸಿ, ಅಧ್ಯಾಪಕರು, ಅಧ್ಯಾಪಕೇತರರು, ಬಿಸಿಎ ಮತ್ತು ಬಿಎಸ್ಸಿ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

14 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

14 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

14 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

14 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

14 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

16 hours ago