ಮೈಸೂರು: ಇಂದು ಮಾಧ್ಯಮ ಕ್ಷೇತ್ರದಲ್ಲಿ ಅನೇಕ ಅವಕಾಶ ಮತ್ತು ಸಾಧ್ಯತೆಗಳಿವೆ. ಕರ್ತವ್ಯನಿಷ್ಠೆ ಕೆಲಸದ ಬದುಕಿಗೆ ಅಗತ್ಯವೆಂಬುದನ್ನು ಅರಿತು ಕೆಲಸ ಮಾಡಡಬೇಕು ಎಂದು ಮೈಸೂರು ವಿಶ್ವವಿದ್ಯಾನಿಲುಂದ ಕುಲಪತಿಗಳಾದ ಪ್ರೊ. ಎನ್.ಕೆ. ಲೋಕನಾಥ್ ಹೇಳಿದರು.
ಇಂದು ನಗರದ ಮಾನಸಗಂಗೋತ್ರಿ ಮಾನವಿಕ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮೈಸೂರು ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ ಗುರುವಾರ ಏರ್ಪಡಿಸಿದ್ದ ಏನ್ ಸಮಾಚಾರ. ! ಮೀಡಿಯಾ ಹಬ್ಬ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯೆ, ವಸ್ತುನಿಷ್ಠತೆ ,ನಿರಂತರ ಶ್ರಮ, ಸದೃಢ ಮನಸ್ಥಿತಿ, ಈ ಅಂಶಗಳನ್ನು ಪತ್ರಿಕೋದ್ಯಮ ಮತ್ತು ಸಂವಹನದ ವಿದ್ಯಾರ್ಥಿಗಳು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಪತ್ರಕರ್ತರಾಗುತ್ತಾರೆ ಎಂದರು.
ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ. ಒಂದೇ ವಿಚಾರದ ಬಗ್ಗೆ ಚರ್ಚಿಸುತ್ತಿದ್ದಾರೆ. ಇಂದಿನ ತಂತ್ರಜ್ಞಾನದ ದಿನಗಳಲ್ಲಿ ಡಿಜಿಟಲ್ ಬಳಸಿಕೊಳ್ಳುತ್ತಾರೆ. ಮಕ್ಕಳಿಗೆ ಹೆಚ್ಚು ಓದು ಹವ್ಯಾಸವಿಲ್ಲ. ನಿಜವಾದ ಪತ್ರಕರ್ತರಾದವರು ಚೆನ್ನಾಗಿ ಓದಬೇಕು. ನೀವು ಬರೆದ ಲೇಖನದ ಬಗ್ಗೆ ಮಾತನಾಡಬೇಕು. ಸುದ್ದಿಯಲ್ಲಿ ನಿಖರತೆ ವಸ್ತು ನಿಷ್ಠೆ ಪ್ರಾಮಾಣಿಕತೆ ಇರಬೇಕು ಎಂದು ಹೇಳಿದರು.
ಸತ್ಯಕ್ಕಿಂತ ಸುಳ್ಳು ತುಂಬಾ ವೈರಲ್ ಆಗುತ್ತಿದೆ. ಪತ್ರಿಕೋದ್ಯಮದ ಭವಿಷ್ಯ ನಿಮ್ಮ ಕೈಯಲ್ಲಿದೆ.
ಉತ್ತಮ ಪತ್ರಕರ್ತರು ಆಗಬೇಕು ಎಂದರೆ ಒಂದು ವಿಷಯವನ್ನು ಹೊಸ ತನದಿಂದ ವಿಶ್ಲೇಷಣೆ ಮಾಡಬೇಕು. ಆಳವಾದ ಅಧ್ಯಯನ ಬಹಳ ಮುಖ್ಯವಾಗಿದ್ದು ಸತ್ಯ ಎಂಬುದನ್ನು ಅರಿತುಕೊಂಡು ಪತ್ರಕರ್ತರಾಗುವ ಜೊತೆ ಸಮಾಜ ತಿದ್ದುವ ಕೆಲಸ ವಾಗಬೇಕು ಎಂದು ತಿಳಿಸಿದರು.
ಎನ್.ಡಿ.ಟಿ.ವಿ. ಮಾಜಿ ಕಾರ್ಯ ನಿರ್ವಾಹಕ ಸಂಪಾದಕರಾದ ಮಾಯಾ ಶರ್ಮಾ ಅವರು ಮಾತನಾಡಿ, ಮಾಹಿತಿ ಪ್ರಮುಖ ಶಕ್ತಿಯಾಗಿ ಪಾತ್ರವಹಿಸುತ್ತದೆ. ಪ್ರೆಸ್ ರ‍್ಯಾಂಕಿಂಗ್ ಕಡಿಮೆ ಆಗುತ್ತಿದೆ ಎಂದು ಭಾವಿಸಬಾರದು. ಮೀಡಿಯಾ ಇಂದು ಒನ್ ಸೈಡ್ ಆಗುತ್ತದೆ ಅದರೆ ನಿಮ್ಮಲ್ಲಿ ಎಥಿಕಲ್ ವ್ಯಾಲ್ಯೂ ಇರಬೇಕು ಎಂದು ಹೇಳಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯಾಷಾ ಖಾನಂ ಮಾತನಾಡಿ, ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಎಲ್ಲಾ ಕ್ಷೇತ್ರದ ಬಗ್ಗೆ ಆಲೋಚಿಸುತ್ತಾರೆ. ಅದರಂತೆ ಮಾಧ್ಯಮ ಕ್ಷೇತ್ರದ ಬಗ್ಗೆ ಉತ್ತಮ ಆಲೋಚನೆ ಇರುವುದರಿಂದ ಮಿಡಿಯಾ ಹಬ್ಬ ಆಚರಿಸುತ್ತಿದ್ದೇವೆ. ಇಂದು ಪತ್ರಿಕೋದ್ಯಮದ ಬಗ್ಗೆ ನಂಬಿಕೆ ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಯುವ ಪತ್ರಕರ್ತರು ಅದನ್ನು ಬದಲಿಸಬೇಕು. ಉತ್ತಮ ವಿಷಯಗಳ ಬಗ್ಗೆ ಚರ್ಚೆ ಆಗಬೇಕು. ಕಲ್ಯಾಣ ಕರ್ನಾಟಕದ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯುವ ಪತ್ರಕರ್ತಕರು ಕ್ಯಾಂಪಸ್ ನಲ್ಲಿ ಇರುವಾಗ ಎಂಜಾಯ್ ಮಾಡಿ. ಅದರೆ, ಹೊರಗೆ ಹೋದಾಗ ಪ್ರಶ್ನಿಸುವ ಮುನ್ನ ಅದರ ಬಗ್ಗೆ ತಿಳಿದುಕೊಳ್ಳಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡೆಮಿಯ ರಿಜಿಸ್ಟ್ರಾರ್ ಸಹನಾ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಎನ್.ಮಮತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ. ಹರೀಶ್ ಹಾಗೂ ಮತ್ತಿತರರು ಇದ್ದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…