ಮೈಸೂರು ನಗರ

ಮಾಧ್ಯಮ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿವೆ: ಪ್ರೊ.ಎನ್.ಕೆ.ಲೋಕನಾಥ್

ಮೈಸೂರು: ಇಂದು ಮಾಧ್ಯಮ ಕ್ಷೇತ್ರದಲ್ಲಿ ಅನೇಕ ಅವಕಾಶ ಮತ್ತು ಸಾಧ್ಯತೆಗಳಿವೆ. ಕರ್ತವ್ಯನಿಷ್ಠೆ ಕೆಲಸದ ಬದುಕಿಗೆ ಅಗತ್ಯವೆಂಬುದನ್ನು ಅರಿತು ಕೆಲಸ ಮಾಡಡಬೇಕು ಎಂದು ಮೈಸೂರು ವಿಶ್ವವಿದ್ಯಾನಿಲುಂದ ಕುಲಪತಿಗಳಾದ ಪ್ರೊ. ಎನ್.ಕೆ. ಲೋಕನಾಥ್ ಹೇಳಿದರು.

ಇಂದು ನಗರದ ಮಾನಸಗಂಗೋತ್ರಿ ಮಾನವಿಕ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮೈಸೂರು ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ ಗುರುವಾರ ಏರ್ಪಡಿಸಿದ್ದ ಏನ್ ಸಮಾಚಾರ. ! ಮೀಡಿಯಾ ಹಬ್ಬ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯೆ, ವಸ್ತುನಿಷ್ಠತೆ ,ನಿರಂತರ ಶ್ರಮ, ಸದೃಢ ಮನಸ್ಥಿತಿ, ಈ ಅಂಶಗಳನ್ನು ಪತ್ರಿಕೋದ್ಯಮ ಮತ್ತು ಸಂವಹನದ ವಿದ್ಯಾರ್ಥಿಗಳು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಪತ್ರಕರ್ತರಾಗುತ್ತಾರೆ ಎಂದರು.

ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ. ಒಂದೇ ವಿಚಾರದ ಬಗ್ಗೆ ಚರ್ಚಿಸುತ್ತಿದ್ದಾರೆ. ಇಂದಿನ ತಂತ್ರಜ್ಞಾನದ ದಿನಗಳಲ್ಲಿ ಡಿಜಿಟಲ್ ಬಳಸಿಕೊಳ್ಳುತ್ತಾರೆ. ಮಕ್ಕಳಿಗೆ ಹೆಚ್ಚು ಓದು ಹವ್ಯಾಸವಿಲ್ಲ. ನಿಜವಾದ ಪತ್ರಕರ್ತರಾದವರು ಚೆನ್ನಾಗಿ ಓದಬೇಕು. ನೀವು ಬರೆದ ಲೇಖನದ ಬಗ್ಗೆ ಮಾತನಾಡಬೇಕು. ಸುದ್ದಿಯಲ್ಲಿ ನಿಖರತೆ ವಸ್ತು ನಿಷ್ಠೆ ಪ್ರಾಮಾಣಿಕತೆ ಇರಬೇಕು ಎಂದು ಹೇಳಿದರು.

ಸತ್ಯಕ್ಕಿಂತ ಸುಳ್ಳು ತುಂಬಾ ವೈರಲ್ ಆಗುತ್ತಿದೆ. ಪತ್ರಿಕೋದ್ಯಮದ ಭವಿಷ್ಯ ನಿಮ್ಮ ಕೈಯಲ್ಲಿದೆ.
ಉತ್ತಮ ಪತ್ರಕರ್ತರು ಆಗಬೇಕು ಎಂದರೆ ಒಂದು ವಿಷಯವನ್ನು ಹೊಸ ತನದಿಂದ ವಿಶ್ಲೇಷಣೆ ಮಾಡಬೇಕು. ಆಳವಾದ ಅಧ್ಯಯನ ಬಹಳ ಮುಖ್ಯವಾಗಿದ್ದು ಸತ್ಯ ಎಂಬುದನ್ನು ಅರಿತುಕೊಂಡು ಪತ್ರಕರ್ತರಾಗುವ ಜೊತೆ ಸಮಾಜ ತಿದ್ದುವ ಕೆಲಸ ವಾಗಬೇಕು ಎಂದು ತಿಳಿಸಿದರು.

ಎನ್.ಡಿ.ಟಿ.ವಿ. ಮಾಜಿ ಕಾರ್ಯ ನಿರ್ವಾಹಕ ಸಂಪಾದಕರಾದ ಮಾಯಾ ಶರ್ಮಾ ಅವರು ಮಾತನಾಡಿ, ಮಾಹಿತಿ ಪ್ರಮುಖ ಶಕ್ತಿಯಾಗಿ ಪಾತ್ರವಹಿಸುತ್ತದೆ. ಪ್ರೆಸ್‌ ರ‍್ಯಾಂಕಿಂಗ್‌ ಕಡಿಮೆ ಆಗುತ್ತಿದೆ ಎಂದು ಭಾವಿಸಬಾರದು. ಮೀಡಿಯಾ ಇಂದು ಒನ್ ಸೈಡ್ ಆಗುತ್ತದೆ ಅದರೆ ನಿಮ್ಮಲ್ಲಿ ಎಥಿಕಲ್‌ ವ್ಯಾಲ್ಯೂ ಇರಬೇಕು ಎಂದು ಹೇಳಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯಾಷಾ ಖಾನಂ ಮಾತನಾಡಿ, ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಎಲ್ಲಾ ಕ್ಷೇತ್ರದ ಬಗ್ಗೆ ಆಲೋಚಿಸುತ್ತಾರೆ. ಅದರಂತೆ ಮಾಧ್ಯಮ ಕ್ಷೇತ್ರದ ಬಗ್ಗೆ ಉತ್ತಮ ಆಲೋಚನೆ ಇರುವುದರಿಂದ ಮಿಡಿಯಾ ಹಬ್ಬ ಆಚರಿಸುತ್ತಿದ್ದೇವೆ. ಇಂದು ಪತ್ರಿಕೋದ್ಯಮದ ಬಗ್ಗೆ ನಂಬಿಕೆ ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಯುವ ಪತ್ರಕರ್ತರು ಅದನ್ನು ಬದಲಿಸಬೇಕು. ಉತ್ತಮ ವಿಷಯಗಳ ಬಗ್ಗೆ ಚರ್ಚೆ ಆಗಬೇಕು. ಕಲ್ಯಾಣ ಕರ್ನಾಟಕದ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯುವ ಪತ್ರಕರ್ತಕರು ಕ್ಯಾಂಪಸ್ ನಲ್ಲಿ ಇರುವಾಗ ಎಂಜಾಯ್ ಮಾಡಿ. ಅದರೆ, ಹೊರಗೆ ಹೋದಾಗ ಪ್ರಶ್ನಿಸುವ ಮುನ್ನ ಅದರ ಬಗ್ಗೆ ತಿಳಿದುಕೊಳ್ಳಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡೆಮಿಯ ರಿಜಿಸ್ಟ್ರಾರ್ ಸಹನಾ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ.ಎನ್.ಮಮತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ. ಹರೀಶ್ ಹಾಗೂ ಮತ್ತಿತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

4 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

4 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

5 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

5 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

6 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

12 hours ago