ಮೈಸೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಮೈಸೂರಿನ ಪುರಭವನದಲ್ಲಿ ಸಚಿವ ಮಹದೇವಪ್ಪ ಅವರು ಅಂಬೇಡ್ಕರ್ ಪೀಠಿಕೆ ಉದ್ಘಾಟಿಸಿದರು. ಈ ವೇಳೆ ಬೆಂಬಲಿಗರು ಮುಂದಿನ ಸಿಎಂ ಎಚ್.ಸಿ.ಮಹದೇವಪ್ಪ ಅವರಿಗೆ ಜೈ ಎಂದು ಜೈಕಾರ ಹಾಕಿದರು. ಈ ವೇಳೆ ಮುಗುಳ್ನಗುತ್ತಾ ಮಾತನಾಡಿದ ಸಚಿವರು, ಇದೆಲ್ಲ ಅಭಿಮಾನಿಗಳ ಆಸೆ. ಸಿಎಂ ಕುರ್ಚಿ ಖಾಲಿ ಇಲ್ಲ ಎಂದರು.
ಈ ವೇಳೆಯೂ ಸುಮ್ಮನಿರದ ಅಭಿಮಾನಿಗಳು ಮುಂದಿನ ಸಿಎಂ ಎಚ್.ಸಿ.ಮಹದೇವಪ್ಪ ಎಂದು ಜೈಕಾರ ಹಾಕಿದರು. ಈ ವೇಳೆ ಮಾತನಾಡಿದ ಎಚ್‌ಸಿಎಂ, ಸಿಎಂ ಖುರ್ಚಿ ಖಾಲಿ ಇಲ್ಲ, ಸಿಎಂ ಸಿದ್ದರಾಮಯ್ಯ ಅವ್ರೇ ಸಿಎಂ. ಹೈಕಮಾಂಡ್ ನನಗೆ ಯಾವುದೇ ಜವಾಬ್ದಾರಿ ನೀಡಿದರು ನಿಭಾಯಿಸುತ್ತೇನೆ. ಮುಂದೆ ಏನು ಆಗುತ್ತದೆ ಎಂಬುದು ನಮಗೆ ಗೊತ್ತಿಲ್ಲ. ಜವಾಬ್ದಾರಿ ಕೊಡೋದು, ಬಿಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿದರು.





