ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು.
ದೀರ್ಘಾವಧಿ ಸಿಎಂ ಸ್ಥಾನ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ. ನನಗೆ ಖುಷಿ ಏನೆಂದರೆ ದೇವರಾಜ ಅರಸು ಹಾಗೂ ನಾನು ಒಂದೇ ಜಿಲ್ಲೆಯವರು. ನನಗೂ ಅರಸು ಅವರಿಗೂ ಹೋಲಿಕೆ ಇಲ್ಲ. ಅರಸು ಅವರು ಸಾಮಾಜಿಕವಾಗಿ ಹಿಂದುಳಿದವರಲ್ಲ. ಜನಸಂಖ್ಯೆಯಲ್ಲಿ ತೀರಾ ಕಡಿಮೆ ಇದ್ದರು. ಸನ್ನಿವೇಶ ಬಂತು ಅದ್ದರಿಂದ ಇಲ್ಲಿಯವರೆಗೂ ಮುಂದುವರೆದಿದ್ದೇನೆ. ಅರಸು ಅವರ ಕಾಲ ಬೇರೆ ಈಗ ಕಾಲ ಬೇರೆ. ಆಗ ಮುಖ್ಯಮಂತ್ರಿಯಾಗಿದ್ದಾಗ ಜನರೇ ದುಡ್ಡು ಕೊಟ್ಟು ಚುನಾವಣೆ ಮಾಡುತ್ತಿದ್ದರು. ದಾಖಲೆಗಳು ಇರುವುದೇ ಮುರಿಯುವುದಕ್ಕೆ. ಕ್ರಿಕೆಟ್ ನಲ್ಲಿ ಸಚಿನ್ ದಾಖಲೆಯನ್ನು ಕೊಹ್ಲಿ ಮುರಿಯಲಿಲ್ವ ಮುಂದೆ ನನಗಿಂತ ಹೆಚ್ಚು ಬಜೆಟ್ ಮಂಡನೆ ಮಾಡುವುವವರು ಬರಬಹುದು ಎಂದರು.
ಇನ್ನು ಸಾವಿರ ದಿನದ ಸಾಧನ ಸಮಾವೇಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇನ್ನು ಅದರ ಬಗ್ಗೆ ತೀರ್ಮಾನ ಮಾಡಿಲ್ಲ. ಕೃಷ್ಣೇಬೈರೇಗೌಡ ಒಂದು ಸಮಾವೇಶ ಮಾಡುತ್ತಿನಿ ಅಂತ ಹೇಳಿದ್ದಾರೆ. ಸಂಪುಟ ಪುನರ್ ರಚನೆ ಬಗ್ಗೆ ರಾಹುಲ್ ಗಾಂಧಿ ಜೊತೆ ಮಾತನಾಡುತ್ತೇನೆ. ಅವರು ಯಾವಗ ಬಾ ಎಂದು ಹೇಳುತ್ತಾರೆ ಅವಾಗ ಭೇಟಿಗೆ ತೆರಳುತ್ತೇನೆ ಎಂದು ಹೇಳಿದರು.
ಇನ್ನು ಬಳ್ಳಾರಿ ಗಲಾಟೆ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಶೇಖರ್ ಮೃತದೇಹ ಎರಡು ಬಾರಿ ಮರಣೋತ್ತರ ಪರೀಕ್ಷೆ ಮಾಡಿರುವ ಸಂಗತಿ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಈ ವಿಚಾರ ನನಗೆ ಗೊತ್ತಿಲ್ಲ. ಅದನ್ನ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ ಎಂದರು. ಇನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎನ್ನುವ ಬಿಜೆಪಿ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಪೊಲೀಸರಿಂದ ಸಮರ್ಥವಾಗಿ ತನಿಖೆಯಾಗುತ್ತಿದೆ. ಪೊಲೀಸರ ತನಿಖೆಯಿಂದ ಏನು ವರದಿ ಬರುತ್ತಾದೆ ನೋಡೋಣ. ವರದಿ ಬಂದ ಮೇಲೆ ಏನು ಮಾಡಬೇಕು ನೋಡೋಣ ಎಂದರು.





