ಮೈಸೂರು ನಗರ

ನನಗೂ ದೇವರಾಜ ಅರಸು ಅವರಿಗೂ ಹೋಲಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು.

ದೀರ್ಘಾವಧಿ ಸಿಎಂ ಸ್ಥಾನ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ. ನನಗೆ ಖುಷಿ ಏನೆಂದರೆ ದೇವರಾಜ ಅರಸು ಹಾಗೂ ನಾನು ಒಂದೇ ಜಿಲ್ಲೆಯವರು. ನನಗೂ ಅರಸು ಅವರಿಗೂ ಹೋಲಿಕೆ ಇಲ್ಲ. ಅರಸು ಅವರು ಸಾಮಾಜಿಕವಾಗಿ ಹಿಂದುಳಿದವರಲ್ಲ. ಜನಸಂಖ್ಯೆಯಲ್ಲಿ ತೀರಾ ಕಡಿಮೆ ಇದ್ದರು. ಸನ್ನಿವೇಶ ಬಂತು ಅದ್ದರಿಂದ ಇಲ್ಲಿಯವರೆಗೂ ಮುಂದುವರೆದಿದ್ದೇನೆ. ಅರಸು ಅವರ ಕಾಲ ಬೇರೆ ಈಗ ಕಾಲ ಬೇರೆ. ಆಗ ಮುಖ್ಯಮಂತ್ರಿಯಾಗಿದ್ದಾಗ ಜನರೇ ದುಡ್ಡು ಕೊಟ್ಟು ಚುನಾವಣೆ ಮಾಡುತ್ತಿದ್ದರು. ದಾಖಲೆಗಳು ಇರುವುದೇ ಮುರಿಯುವುದಕ್ಕೆ. ಕ್ರಿಕೆಟ್ ನಲ್ಲಿ ಸಚಿನ್ ದಾಖಲೆಯನ್ನು ಕೊಹ್ಲಿ ಮುರಿಯಲಿಲ್ವ ಮುಂದೆ ನನಗಿಂತ ಹೆಚ್ಚು ಬಜೆಟ್ ಮಂಡನೆ ಮಾಡುವುವವರು ಬರಬಹುದು ಎಂದರು.

ಇನ್ನು ಸಾವಿರ ದಿನದ ಸಾಧನ ಸಮಾವೇಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇನ್ನು ಅದರ ಬಗ್ಗೆ ತೀರ್ಮಾನ ಮಾಡಿಲ್ಲ. ಕೃಷ್ಣೇಬೈರೇಗೌಡ ಒಂದು ಸಮಾವೇಶ ಮಾಡುತ್ತಿನಿ ಅಂತ ಹೇಳಿದ್ದಾರೆ. ಸಂಪುಟ ಪುನರ್‌ ರಚನೆ ಬಗ್ಗೆ ರಾಹುಲ್ ಗಾಂಧಿ ಜೊತೆ ಮಾತನಾಡುತ್ತೇನೆ. ಅವರು ಯಾವಗ ಬಾ ಎಂದು ಹೇಳುತ್ತಾರೆ ಅವಾಗ ಭೇಟಿಗೆ ತೆರಳುತ್ತೇನೆ ಎಂದು ಹೇಳಿದರು.

ಇನ್ನು ಬಳ್ಳಾರಿ ಗಲಾಟೆ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಶೇಖರ್ ಮೃತದೇಹ ಎರಡು ಬಾರಿ ಮರಣೋತ್ತರ ಪರೀಕ್ಷೆ ಮಾಡಿರುವ ಸಂಗತಿ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಈ ವಿಚಾರ‌ ನನಗೆ ಗೊತ್ತಿಲ್ಲ. ಅದನ್ನ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ ಎಂದರು. ಇನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎನ್ನುವ ಬಿಜೆಪಿ ಒತ್ತಾಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಪೊಲೀಸರಿಂದ ಸಮರ್ಥವಾಗಿ ತನಿಖೆಯಾಗುತ್ತಿದೆ. ಪೊಲೀಸರ ತನಿಖೆಯಿಂದ ಏನು ವರದಿ ಬರುತ್ತಾದೆ ನೋಡೋಣ. ವರದಿ ಬಂದ ಮೇಲೆ ಏನು ಮಾಡಬೇಕು ನೋಡೋಣ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

13 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

16 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

17 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

18 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

23 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

23 hours ago