ಮೈಸೂರು ನಗರ

ಜಾತಿ ಗಣತಿಯಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಮಧು ಬಂಗಾರಪ್ಪ

ಮೈಸೂರು: ನಾವು ಮಾಡುತ್ತಿರುವುದು ಜಾತಿ ಗಣತಿಯಲ್ಲ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಯಾವ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಕೊಳ್ಳಲು ಈ ಸಮೀಕ್ಷೆ ಮಾಡುತ್ತಿದ್ದೇವೆ. ನಿನ್ನೆಯಿಂದಷ್ಟೇ ಸಮೀಕ್ಷೆ ಆರಂಭವಾಗಿದೆ. ಎಲ್ಲಿಯೂ ಏನು ಸಮಸ್ಯೆ ಉಂಟಾಗಿಲ್ಲ. ಖುದ್ದು ನಾನೇ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಎಲ್ಲಾ ಕಡೆಯು ಚೆನ್ನಾಗಿ ನಡೆಯುತ್ತಿದೆ.

ಬಿಜೆಪಿಯವರು ವಿನಾಕಾರಣ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜಾತಿ ಗಣತಿ ಮಾಡುತ್ತಿರುವುದು ಕೇಂದ್ರ ಸರ್ಕಾರ ಎಂದು ಹೇಳಿದರು.

ಇದನ್ನು ಓದಿ : ಸಿನಿಪ್ರಿಯರಿಗೆ ಶಾಕ್:‌ ಸಿನಿಮಾ ಟಿಕೆಟ್‌ ದರ 200ರೂ ನಿಗದಿಗೆ ಹೈಕೋರ್ಟ್‌ ತಡೆಯಾಜ್ಞೆ

ಇನ್ನು ಜಿಎಸ್‌ಟಿ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಈಗ ಎಲ್ಲರಿಗೂ ಜಿಎಸ್‌ಟಿ ಲಡ್ಡು ತಿನ್ನಿಸುತ್ತಿದೆ. ಜಿಎಸ್‌ಟಿ ಹೊಸ ನೀತಿಯಿಂದ ದೊಡ್ಡ ಬದಲಾವಣೆ ಆಗುತ್ತಿಲ್ಲ. GST ಹೊರೆ ಕಮ್ಮಿ ವಿಚಾರವನ್ನು ನೋಡುವುದಾದ್ರೆ ರಾಜ್ಯದ ಮಟ್ಟಿಗೆ ತಲಾ 57 ರೂ ಅಷ್ಟೇ. ಆದರೆ ಸಿದ್ದರಾಮಯ್ಯನವರು ಪ್ರತಿ ತಿಂಗಳು 2 ಸಾವಿರ ಕೊಡುತ್ತಿದ್ದಾರೆ. 200 ಯುನಿಟ್ ವಿದ್ಯುತ್ ನೀಡಿ ಮನೆ ಬೆಳಗುತ್ತಿದ್ದಾರೆ.

GST ಪಾಲು ರಾಜ್ಯಕ್ಕೆಷ್ಟು ಕಡಿಮೆ ಸಿಗುತ್ತಿದೆ ಎಂಬುದನ್ನು ಚಿಂತನೆ ಮಾಡಬೇಕು. ಇದರ ಬಗ್ಗೆ ನಮ್ಮ ಸಂಸದರು ಧ್ವನಿ ಎತ್ತದೆ ಇರುವುದು ಬೇಸರ ತಂದಿದೆ. GST ಲಡ್ಡು ಕೇವಲ ಬಿಜೆಪಿಗರಿಗಷ್ಟೇ ಸಿಹಿಯಾಗಿದೆ, ಆದರೆ ರಾಜ್ಯದ ಜನರಿಗೆ ಕಹಿಯಾಗಿದೆ ಎಂದು ಜಿಎಸ್‌ಟಿ ಪರಿಷ್ಕರಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

9 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

10 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

10 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

10 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

10 hours ago