ಮೈಸೂರು ನಗರ

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌ ತಿಳಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ಬಳಿ ಜಿ.ಟಿ.ದೇವೇಗೌಡರು ನಂಬಿಕೆ ಉಳಿಸಿಕೊಂಡರೆ ನಮ್ಮ ಅಭ್ಯಂತರವಿಲ್ಲ. ಜಿ.ಟಿ.ದೇವೇಗೌಡರಿಂದ ನಮ್ಮ ಪಕ್ಷಕ್ಕೆ ಬಹಳ ನಷ್ಟವಾಗಿದೆ. ಅವರು ಒಂದೊಂದು ಚುನಾವಣೆಗೆ ಒಂದೊಂದು ತೀರ್ಮಾನ ಮಾಡುತ್ತಾರೆ. ಇದೀಗ ಅವರ ತೀರ್ಮಾನದಿಂದ ಕಾರ್ಯಕರ್ತರಿಗೆ ಆಘಾತವಾಗಿದೆ ಎಂದು ಹೇಳಿದರು.

ಜೆಡಿಎಸ್‌ ಪಕ್ಷಕ್ಕಿಂತ ನಮಗೆ ಯಾರೂ ದೊಡ್ಡವರಲ್ಲ. ಜಿ.ಟಿ.ದೇವೇಗೌಡರಿಗೆ ಪಕ್ಷ ಎಲ್ಲವನ್ನೂ ಕೊಟ್ಟಿತ್ತು. ಆದರೆ ಮೋಸ ಮಾಡಿದರು. ಹಾಗಾಗಿ ಈ ಭಾಗದಲ್ಲಿ ಸಾಮೂಹಿಕ ನಾಯಕತ್ವ ಕಟ್ಟಿಕೊಂಡಿದ್ದೇವೆ. ನಾಳೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಮಾವೇಶವಿದೆ. ಆ ಕಾರಣ ದೇವೇಗೌಡರಿಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ. ಈ ಎಲ್ಲಾ ತಂತ್ರಗಳು ನಮಗೆ ಅರ್ಥವಾಗುತ್ತದೆ ಎಂದು ಹೇಳಿದರು.

 

 

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

4 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

4 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

4 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

5 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

6 hours ago