ಮೈಸೂರು: ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಶಾಸಕರು ಸಿದ್ದರಾಮಯ್ಯ ಪರ ಇದ್ದಾರೆ. ಸಿಎಂ ಬದಲಾವಣೆ ಮಾಡಬೇಕು ಅಂದರೆ ಏನಾದರೂ ಹಗರಣ ನಡೆದಿರಬೇಕು. ಸಿಎಂ ಸಿದ್ದರಾಮಯ್ಯ ಅವರ ಮೇಲೆ ಯಾವುದೇ ಹಗರಣಗಳ ಆರೋಪವಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯರನ್ನು ಬದಲಾಯಿಸುವ ಪ್ರಶ್ನೆ ಉದ್ಭವಿಸಲ್ಲ.
ಯಾರೋ ಒಂದಿಬ್ಬರು ಸಿಎಂ ಬದಲಾವಣೆ ಅಂತಿದ್ದಾರೆ ಅಷ್ಟೇ. ಆದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.





