ಮೈಸೂರು ನಗರ

ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ರೇಷ್ಮೆ ಮಾರುಕಟ್ಟೆಗೆ ಉಪಯೋಗಿಸಲ್ಪಟ್ಟ ಒಂದೂವರೆ ಎಕರೆ ಜಾಗವನ್ನು ಉದ್ಯಾನವನಕ್ಕೆ ಬಳಸಲು ತೀರ್ಮಾನ ಮಾಡುತ್ತಿದ್ದೇವೆ. ಈಗ ಮತ್ತೆ ಆ ಆದೇಶವನ್ನು ಮರು ಪರಿಶೀಲನೆ ಮಾಡಿದ್ದೇವೆ. ರೇಷ್ಮೆ ಕಾರ್ಖಾನೆಗೆ ತೊಂದರೆ ಆದರೆ ಆ ಜಾಗದಲ್ಲಿ ಕ್ರೀಡಾಂಗಣ ಮಾಡುವುದಿಲ್ಲ. ನಮಗೆ ರೇಷ್ಮೆ ಕಾರ್ಖಾನೆ ಮುಖ್ಯ. ಸರ್ಕಾರಕ್ಕೆ ಈ ವಿಚಾರದಲ್ಲಿ ಯಾವ ಪ್ರತಿಷ್ಠೆ ಇಲ್ಲ. ಕೆಲವರು ಈ ಇಂತಹ ವಿಚಾರದಲ್ಲಿ ಹುಡುಗಾಟ ಆಡುತ್ತಿದ್ದಾರೆ. ಕಾರ್ಮಿಕರು ಆತಂಕ ಪಡುವುದು ಬೇಡ ಸಾರ್ವಜನಿಕರು ಆತಂಕ ಪಡುವುದು ಬೇಡ. ರೇಷ್ಮೆ ಕಾರ್ಖಾನೆ ಬೆಳವಣಿಗೆಗೆ ನಮ್ಮ ಸರ್ಕಾರ ಅತೀ ಹೆಚ್ಚು ಒತ್ತು ಕೊಟ್ಟಿದೆ. ವಿಚಾರ ಗೊತ್ತಿಲ್ಲದವರು ಬಾಯಿಗೆ ಬಂದಹಾಗೆ ಮಾತನಾಡಿದರೆ ಏನೂ ಮಾಡುವದು ಹೇಳಿ. ರೇಷ್ಮೆ ಕಾರ್ಖಾನೆಗೆ ಕುಂದು ಬಾರದಂತೆ ಕಾಪಾಡುವುದು ನಮ್ಮ ಜವಾಬ್ದಾರಿ. ಇದರಲ್ಲಿ ಅನುಮಾನ ಬೇಡ. ಬಿಜೆಪಿ ಅವರು ರಾಜಕೀಯ ಗಾಗಿ ಗೊಂದಲ ಸೃಷ್ಟಿಸಿದ್ದಾರೆ. ಕ್ರೀಡಾ ಅಧಿಕಾರಿಗಳು ಮತ್ತು ರೇಷ್ಮೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ತೀರ ಅನಿವಾರ್ಯ ಅನಿಸಿದರೆ ಆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

14 mins ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago