ಮೈಸೂರು: ಬಿಜೆಪಿಯಲ್ಲಿ ಯಾವುದೇ ಬಂಡಾಯವಿಲ್ಲ. ಪಾರ್ಟಿ ವಿಚಾರ ಬಂದಾಗ ನಾವೆಲ್ಲರೂ ಒಂದೇ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿನ ಭಿನ್ನಾಭಿಪ್ರಾಯ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದರು.
ಬಿಜೆಪಿಯಲ್ಲಿ ಯಾವುದೇ ಬಂಡಾಯವಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ. ಹೈಕಮಾಂಡ್ ಈ ಬಗ್ಗೆ ಎಲ್ಲಾ ತೀರ್ಮಾನ ತೆಗೆದುಕೊಳ್ಳುತ್ತದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ನಮ್ಮ ಪಕ್ಷದ ಸೀನಿಯರ್ ಲೀಡರ್. ಪಕ್ಷದ ನಾಯಕರ ಎಲ್ಲಾ ಭಿನ್ನಾಭಿಪ್ರಾಯಗಳನ್ನು ರಾಷ್ಟ್ರೀಯ ನಾಯಕರು ಸರಿ ಮಾಡುತ್ತಾರೆ ಎಂದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರಿಗೆ ಎಷ್ಟು ಸ್ಥಾನಮಾನ ಸಿಗಬೇಕೋ ಅದು ಸಿಗುತ್ತದೆ. ತಾಯಿ ಚಾಮುಂಡೇಶ್ವರಿ ಶಕ್ತಿ ಆಶೀರ್ವಾದ ಮಾಡ್ತಾಳೆ. ಈ ಬಗ್ಗೆ ಏನು ಹೇಳಬೇಕು ಅದನ್ನು ಈಗಾಗಲೇ ಹೇಳಿದ್ದೀನಿ. ಮತ್ತೆ ಹಳೆಯ ವಿಚಾರದ ಬಗ್ಗೆ ಮತ್ತೆ ಮಾತನಾಡಲ್ಲ ಎಂದು ಹೇಳಿದರು.
ಇನ್ನು ದೆಹಲಿಯಲ್ಲಿ ಅಂಬೇಡ್ಕರ್ ಫೋಟೋಗೆ ಅವಮಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋ ಮುಟ್ಟೋ ಶಕ್ತಿ ಯಾರಿಗಿದೆ? ಅಂತಹ ಗಂಡು ಇಲ್ಲಿ ಯಾರೂ ಹುಟ್ಟಿಲ್ಲ. ಸೂರ್ಯ ಚಂದ್ರ ಇರುವವರೆಗೂ ಅಂಬೇಡ್ಕರ್ ಇರುತ್ತಾರೆ. ಯಾರೋ ಮಾಡುವ ಆರೋಪಗಳು ಸತ್ಯವಲ್ಲ ಎಂದರು.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…