ಮೈಸೂರು ನಗರ

ಮೈಸೂರು ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ: ಡಾ.ನಾಗರಾಜು

ಮೈಸೂರು: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಈ ಬಾರಿ ಮುಂಗಾರು ಮಳೆ ಜಿಲ್ಲೆಯಾದ್ಯಂತ ಉತ್ತಮವಾಗಿ ಬಿದ್ದಿರುವ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮಲ್ಲಿ ಇನ್ನೂ 52 ವಾರಗಳ ಕಾಲ ಜಾನುವಾರುಗಳಿಗೆ ಬೇಕಾದ ಮೇವಿನ ದಾಸ್ತಾನು ಇದೆ. ಜೊತೆಗೆ ಹಸಿರು ಮೇವು ಬೆಳೆಯಲು ಇಲ್ಲಿಯವರೆಗೆ ಸುಮಾರು 13 ಸಾವಿರ ಮೇವಿನ‌ ಬೀಜದ ಕಿಟ್‌ಗಳನ್ನು ವಿತರಣೆ ಮಾಡಲಾಗಿದೆ. ಇನ್ನೂ 7 ಸಾವಿರ ಕಿಟ್‌ಗಳನ್ನು ವಿತರಣೆ ಮಾಡಲು ಇಲಾಖೆ ಮುಂದಾಗಿದೆ. ಬೇಸಿಗೆ ಸಂದರ್ಭದಲ್ಲಿ ರಾಸುಗಳನ್ನು ಹೇಗೆ ನೋಡಿಕೊಳ್ಳಬೇಕು ಎಂದು ರೈತ ಬಂಧುಗಳಿಗೆ ನಮ್ಮ ಇಲಾಖೆ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ ಬೇಸಿಗೆ ಸಂದರ್ಭದಲ್ಲಿ ರಾಸುಗಳನ್ನು ಬಿಸಿಲಿಗೆ ಹೆಚ್ಚಾಗಿ ಬಿಡದೇ ಮುಂಜಾನೆ ಮತ್ತು ಸಂಜೆ ವೇಳೆ ಹೊರಗಡೆ ಬಿಡಬೇಕು.
ಅವುಗಳಿಗೆ ಶುದ್ಧವಾದ ತಣ್ಣನೆಯ ನೀರನ್ನೇ ಕೊಡಬೇಕು. ಹಸಿರು ಮೇವನ್ನು ಹೆಚ್ಚು ಹೆಚ್ಚು ಕೊಡಬೇಕು ಎಂದು ಸಲಹೆ ನೀಡಿದರು.

ಇನ್ನು ರಾಸುಗಳಿಗೆ ಬರುವ ಕಾಲು ಬಾಯಿ ಜ್ವರದ ನಿಯಂತ್ರಣಕ್ಕೆ ಈಗಾಗಲೇ 6 ಬಾರಿ ಲಸಿಕಾ ಅಭಿಯಾನ ಮುಗಿಸಿದ್ದೇವೆ. ಮತ್ತೆ 7ನೇ ಲಸಿಕಾ ಕಾರ್ಯಕ್ರಮವನ್ನು ಮುಂದಿನ ಏಪ್ರಿಲ್ ತಿಂಗಳಿನಿಂದ ಆರಂಭಿಸುತ್ತೇವೆ. ಈಗ ಎಲ್ಲೂ ಕೂಡ ಕಾಲು ಬಾಯಿ ಜ್ವರದಂತಹ ಪ್ರಕರಣಗಳು ಕಂಡು ಬರುತ್ತಿಲ್ಲ. ಲಸಿಕೆ ಹಾಕುವುದರಿಂದ ಸಾಕಷ್ಟು ಕಡಿಮೆ ಆಗಿದೆ. ಈಗಾಗಲೇ ಔಷಧಿ ದಾಸ್ತಾನು ಕೂಡ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 mins ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

6 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

6 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

6 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

6 hours ago