ಮೈಸೂರು: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ನಾಡಿನ ಹಲವು ದೇವಾಲಯಗಳು ಬಂದ್ ಆಗಲಿವೆ. ಆದರೆ ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಪೂಜೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಮೈಸೂರಿನ ಚಾಮುಂಡಿಬೆಟ್ಟದ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ರಾತ್ರಿ 9 ಗಂಟೆಗೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಚಂದ್ರಗ್ರಹಣ ಕಾಲದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಗ್ರಹಣ ಸ್ಪರ್ಶ ಕಾಲ ಹಾಗೂ ಮೋಕ್ಷ ಕಾಲದಲ್ಲಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗುವುದು.
ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜೆಗಳು ದೇವಾಲಯದಲ್ಲಿ ನೆರವೇರಲಿದೆ. ಗ್ರಹಣದ ಪೂಜೆ ವೇಳೆ ಯಾವುದೇ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ. ಚಂದ್ರಗ್ರಹಣದ ನಂತರ ದೇವಸ್ಥಾನದ ಆಲಯ ಶುದ್ಧೀಕರಣ ನಡೆಯಲಿದೆ. ನಾಳೆ ಬೆಳಿಗ್ಗೆ 8 ಗಂಟೆಯಿಂದ ಎಂದಿನಂತೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ





