ಮೈಸೂರು ನಗರ

ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಸಿಎಂ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧಪಡಿಸಿಕೊಂಡಿದ್ದಾರೆ: ಬಿ.ವೈ.ವಿಜಯೇಂದ್ರ

ಮೈಸೂರು: ಸಿದ್ದರಾಮಯ್ಯ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಜಾತಿಗಣತಿ ಜಾರಿಗೆ ತರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು 10 ವರ್ಷಗಳ ನಂತರ ಜಾತಿಗಣತಿ‌ ಜಾರಿಗೆ ಹೊರಟಿದ್ದಾರೆ. ತಮ್ಮ ಸ್ಥಾನವನ್ನ ಭದ್ರಪಡಿಸಿಕೊಳ್ಳಲು ಜಾರಿಗೆ ತರುವ ಯತ್ನ ನಡೆಯುತ್ತಿದೆ. ಕಾಂತರಾಜ‌ ವರದಿಯನ್ನು 10 ವರ್ಷದ ಬಳಿಕ ಜಾರಿಗೆ ತರಲು ಹೋಗಿದ್ದು ಅವೈಜ್ಞಾನಿಕ. 150 ಕೋಟಿ ರೂ ವೆಚ್ಚ ಮಾಡಿ ತಯಾರಿಸಿದ ವರದಿ ಬುಟ್ಟಿಗೆ ಹಾಕಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಕುಂಠಿತವಾಗಿದೆ. ಭ್ರಷ್ಟಾಚಾರ ರಾಜ್ಯಾದ್ಯಂತ ತಾಂಡವವಾಡುತ್ತಿದೆ. ರಾಜ್ಯ ಉಸ್ತುವಾರಿ ಸುರ್ಜೇವಾಲ ರಾಜ್ಯಕ್ಕೆ ಬಂದಿದ್ರು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಸಿಎಂ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧಪಡಿಸಿಕೊಂಡಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರು ಯಾವ ಕಾರಣಕ್ಕೆ ಅವರು ಸೈಟ್ ವಾಪಸ್ ನೀಡಿದ್ರು? ಸಚಿವರಾಗಿದ್ದ ನಾಗೇಂದ್ರ ಯಾಕೆ ರಾಜೀನಾಮೆ ನೀಡಿದ್ರು? ಬಿಜೆಪಿ ನಡೆಸಿದ ಜನಾಕ್ರೋಶ ಯಾತ್ರೆಯಿಂದ‌ ಜನ ಜಾಗೃತರಾಗಿದ್ದಾರೆ. ಈ ಸರ್ಕಾರದ ವಿರುದ್ಧ ಶೀಘ್ರ ದಂಗೆ ಹೇಳ್ತಾರೆ. ಸಿಎಂ ಅಧಿಕೃತವಾಗಿ ರಾಜೀನಾಮೆ‌ ಕೊಡುವುದೊಂದೇ ಭಾಗ್ಯ ಎಂದು ಲೇವಡಿ ಮಾಡಿದರು.

ಇನ್ನು ಎಲ್ಲರೂ ಸಿಎಂ ರಾಜೀನಾಮೆ ಪಡೆದು ದೆಹಲಿಗೆ ಕಳಿಸಲು ತೀರ್ಮಾನ ಮಾಡಿದ್ದಾರೆ. ಅಹಿಂದ ಹೆಸರನ್ನು ಹೇಳಿಕೊಂಡು ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದಾರೆ. ಎಲ್ಲ ಅಹಿಂದ ವರ್ಗಗಳನ್ನ ಅವರು ಕಡೆಗಣಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸ್ಥಾನ ಪಲ್ಲಟ ಆಗಲಿದೆ. ಅತಿ ಶೀಘ್ರದಲ್ಲೆ ಸಿಎಂ ರಾಜೀನಾಮೆ ನೀಡುತ್ತಾರೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಣಗಳಾಗ್ತಿವೆ. ಮೊನ್ನೆ ರಾಮನಗರದ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿ.ಆರ್.ಪಾಟೀಲ್ ಲಾಟರಿ ಸಿಎಂ ಎಂದಿದ್ದಾರೆ ದೇವರಾಜ ಅರಸು ಅವರ ದಾಖಲೆ ಮುರಿತೀನಿ ಎಂದಿದ್ದರು. ಅದೇ ರೀತಿ ರಾಜೀನಾಮೆ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

6 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

12 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

12 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

13 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

14 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

20 hours ago