ಮೈಸೂರು ನಗರ

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಖದೀಮರು ಹಳ್ಳಿ ಜನರನ್ನೇ ಟಾರ್ಗೆಟ್‌ ಮಾಡುತ್ತಿದ್ದಾರೆ.

ಆಸ್ಪತ್ರೆ ಆವರಣದಲ್ಲಿ ಪ್ರತಿ ದಿನವೂ ಕಳ್ಳತನ ನಡೆಯುತ್ತಿದ್ದು, ಖದೀಮರು ರೋಗಿಯ ಸಂಬಂಧಿಕರನ್ನೇ ಟಾರ್ಗೆಟ್‌ ಮಾಡುತ್ತಿದ್ದಾರೆ.

ಆಸ್ಪತ್ರೆ ಹೊರಗಡೆ ಮಲಗಿರುವಾಗ ಮೊಬೈಲ್, ಹಣ ಕಳ್ಳತನವಾಗುತ್ತಿದ್ದು, ನಿನ್ನೆ ಮಲಗಿದ್ದ ವ್ಯಕ್ತಿಯ ಬಳಿ ಇದ್ದ 9 ಸಾವಿರ ಹಣ ಹಾಗೂ ಒಂದು ಮೊಬೈಲ್‌ ಕಳುವಾಗಿದೆ.

ಎರಡು ದಿನದ ಹಿಂದೆ ಕಳ್ಳನೋರ್ವ ಹಣ ಎಗರಿಸಿ ಹೋಗುವಾಗ ವ್ಯಕ್ತಿಯು ಕೂಗಿಕೊಂಡಿದ್ದಾನೆ. ಈ ವೇಳೆ ಕಳ್ಳನನ್ನು ಹಿಡಿಯಲು ಹೋದ ಅಕ್ಕಪಕ್ಕದಲ್ಲಿದ್ದವರಿಗೆ ದೊಡ್ಡದಾದ ಚಾಕು ತೋರಿಸಿ ಕಳ್ಳ ಪರಾರಿಯಾಗಿದ್ದಾನೆ. ಈ ವೇಳೆ ಚಾಕು ಕಂಡು ಭಯಗೊಂಡ ಜನರು ವಾಪಸ್ ಆಸ್ಪತ್ರೆ ಬಳಿ ಓಡಿ ಬಂದಿದ್ದಾರೆ.

ಸೆಕ್ಯೂರಿಟಿ ಇಲ್ಲದ ಚಲುವಾಂಬ ಆಸ್ಪತ್ರೆಯಲ್ಲಿ ರೋಗಿಯ ಸಂಬಂಧಿಕರಿಗೆ ಕಳ್ಳರ ಕಾಟ ಹೆಚ್ಚಾಗಿದೆ. ಎಲ್ಲಿ ದೂರು ಕೊಡಬೇಕೋ ಗೊತ್ತಿಲ್ಲ, ಅದಕ್ಕಾಗಿ ದೂರು ನೀಡಲ್ಲ. ರಾತ್ರಿ 10 ಗಂಟೆ ಸಮಯದಲ್ಲಿ ಪೊಲೀಸರು ಬೀಟ್ಸ್ ಹಾಕಿ ಮತ್ತೆ ಬರುವುದಿಲ್ಲ. ಕಳ್ಳರಿಗೆ ಪೊಲೀಸರ ಭಯವಿಲ್ಲ. ಅದಕ್ಕಾಗಿ ರಾತ್ರಿ ವೇಳೆ ಹಳ್ಳಿ ಜನರ ಮೇಲೆ ಕಳ್ಳರ ಕೈಚಳಕ ಹೆಚ್ಚಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

6 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

19 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

20 hours ago