ಮೈಸೂರು ನಗರ

ಇದು ಕರ್ನಾಟಕಕ್ಕೆ ವಿರುದ್ಧವಾದ ಬಜೆಟ್:‌ ಕೇಂದ್ರ ಬಜೆಟ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದಿನ ಕೇಂದ್ರ ಬಜೆಟ್‌ ದೂರದೃಷ್ಟಿ ಇಲ್ಲದ, ದೇಶದ ಹಿತದೃಷ್ಟಿಯಿಂದ ಕರ್ನಾಟಕದ ಹಿತದೃಷ್ಟಿಯಿಂದ ಬಹಳ ನಿರಾಶದಾಯಕ ಬಜೆಟ್‌ ಆಗಿದೆ ಎಂದು ಟೀಕೆ ಮಾಡಿದ್ದಾರೆ.

ಈ ಬಾರಿಯ ಬಜೆಟ್‌ ಹೈಲೈಟ್ಸ್‌ಗಳನ್ನು ಗಮನಿಸಿದ್ದೇನೆ. ಇದೊಂದು ನಿರಾಶದಾಯಕ ಬಜೆಟ್.‌ ಬಜೆಟ್‌ಗೂ ಮೊದಲೇ ಪೂರ್ವಭಾವಿ ಸಭೆಗೆ ಕರೆದಿದ್ದರು. ರಾಜ್ಯದಿಂದ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿದ್ದರು. ನಾವು ರಾಜ್ಯದಿಂದ ಹಲವು ಬೇಡಿಕೆ ಇಟ್ಟಿದ್ದೆವು. ಆದರೆ ನಮ್ಮ ಬೇಡಿಕೆಗಳು ಕೇವಲ ಬೇಡಿಕೆಗಳಾಗಿವೆ. ಬಜೆಟ್‌ನಲ್ಲಿ ಒಂದೇ ಒಂದು ಬೇಡಿಕೆಯನ್ನು ಈಡೇರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು 50 ಲಕ್ಷದ 65 ಸಾವಿರದ 345 ಕೋಟಿ ರೂ ಬಜೆಟ್‌ ಮಂಡಿಸಿದ್ದು, ಅದರಲ್ಲಿ ಕರ್ನಾಟಕಕ್ಕೆ ಏನೂ ಇಲ್ಲ ಎಂದು ಕಿಡಿಕಾರಿದರು.

ಇನ್ನು ಹೆಚ್ಚು ತೆರಿಗೆ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ನಂ.2 ಆಗಿದೆ. ಆದರೆ ನಮ್ಮ ರಾಜ್ಯವನ್ನು ಬಿಟ್ಟು ಬಿಹಾರ ಹಾಗೂ ಆಂಧ್ರಪ್ರದೇಶದಕ್ಕೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ ಎಂದು ಕಿಡಿಕಾರಿದರು.

ಒಟ್ಟಾರೆಯಾಗಿ ಈ ಬಜೆಟ್‌ ಅತ್ಯಂತ ನಿರಾಶದಾಯಕ. ಕರ್ನಾಟಕಕ್ಕೆ ವಿರುದ್ಧವಾಗಿರುವ ಬಜೆಟ್‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇದುವರೆಗೂ ಬಜೆಟ್‌ನಲ್ಲಿ ನಮಗೆ ಘೋಷಣೆ ಮಾಡಿ ಚೊಂಬು ನೀಡಿದ್ರು. ಅದೇ ರೀತಿ ಈಗ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೂ ಚೊಂಬು ಕೊಡ್ತಾರೆ ಎಂದು ಲೇವಡಿ ಮಾಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago