It’s been two and a half years without grants for MLAs: MP Basavaraj Bommai mocks
ಮೈಸೂರು: ನಾನೇ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲಿನಂತೆ ರೆಬೆಲಿಯನ್ ಸಿದ್ದರಾಮಯ್ಯ ಆದರೆ ಯಾವುದೇ ಕಾರಣಕ್ಕೂ ಅಧಿಕಾರ ಬಿಟ್ಟು ಕೊಡುವುದಿಲ್ಲ. ಕಾಂಪ್ರಮೈಸ್ ಸಿದ್ದರಾಮಯ್ಯ ಆದರೆ ಅಧಿಕಾರ ಬಿಟ್ಟುಕೊಡುತ್ತಾರೆ ಎಂದರು.
ಇದನ್ನು ಓದಿ: ರಾಜ್ಯ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಆರ್.ಅಶೋಕ್ ವಾಗ್ದಾಳಿ
ಸಿದ್ದರಾಮಯ್ಯ ಎಷ್ಟರ ಮಟ್ಟಿಗೆ ತಮ್ಮ ಗಟ್ಟಿತನ ಉಳಿಸಿಕೊಂಡಿದ್ದಾರೆ ಎಂಬುದು ಈ ತಿಂಗಳಿನಲ್ಲಿ ಗೊತ್ತಾಗಲಿದೆ. ನಾವು ನೋಡಿದ ಸಿದ್ದರಾಮಯ್ಯ ಮೊದಲಿನಿಂದಲೂ ರೆಬೆಲಿಯನ್. ಅವರದ್ದು ಯಾವಾಗಲೂ ಗಟ್ಟಿ ಗಡಸುತನದ ರಾಜಕಾರಣ. ಅದೇ ಮೂಲ ಸಿದ್ದರಾಮಯ್ಯ ಈಗ ಅಧಿಕಾರದ ಆಸೆಗಾಗಿ ಬದಲಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಒಳಜಗಳದ ವಿಚಾರವಾಗಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ನಮ್ಮ ವಿರೋಧಿ ಅವರ ಸಿದ್ದಾಂತವನ್ನು ಬಿಜೆಪಿ ವಿರೋಧಿಸುತ್ತಾ ಬಂದಿದೆ. ದೇಶದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಇರಬೇಕು ಎಂಬುದು ನಮ್ಮ ನಿಲುವು ಎಂದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…