ಮೈಸೂರು ನಗರ

ಬಿಜೆಪಿ-ಜೆಡಿಎಸ್ ಧರ್ಮಸ್ಥಳ ಚಲೋ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು.!

ಮೈಸೂರು: ಬಿಜೆಪಿ ಹಾಗೂ ಜೆಡಿಎಸ್‌ ಧರ್ಮಸ್ಥಳ ಚಲೋ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ತನಿಖೆಯನು ವೀರೇಂದ್ರ ಹೆಗಡೆ ಅವರೇ ಸ್ವಾಗತ ಮಾಡಿದ್ದಾರೆ. ಸತ್ಯ ಹೊರಬರಬೇಕು. ಧರ್ಮಸ್ಥಳದ ಅನುಮಾನ ತೂಗುಕತ್ತಿಯಿಂದ ಹೊರ ಹೋಗಲಿ ಎಂದು ಎಸ್ಐಟಿ ಮಾಡಿದ್ದೇವೆ. ಬಿಜೆಪಿ ಕೂಡ ಸ್ವಾಗತ ಮಾಡಿದೆ. ಈಗ ರ್ಯಾಲಿ ಮಾಡುತ್ತಿದ್ದಾರೆ. ಆದರೆ ಬಿಜೆಪಿಗೆ ಧರ್ಮ ಜಾತಿ ಏನು ಗೊತ್ತಿಲ್ಲ. ಬಿಜೆಪಿಯವರು ಧರ್ಮಸ್ಥಳಕ್ಕೆ ಧರ್ಮ ಯಾತ್ರೆ ಮಾಡ್ತಾರೆ. ಅದೇ ರಾಜ್ಯಕ್ಕೆ ಅನ್ಯಾಯ ಆಗಿದೆ. ಈ ಬಗ್ಗೆ ಕೇಂದ್ರದಲ್ಲಿ ಅನುದಾನದ ಬಗ್ಗೆ ಮಾತೆ ಎತ್ತಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನು ಬಿಜೆಪಿ ಇದ್ದಾಗ ಸಿಬಿಐಗೆ ಒಂದು ಪ್ರಕರಣ ಕೂಡ ಕೊಟ್ಟಿಲ್ಲ. ಈಗ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಕೊಡಿ ಅಂತೆಲ್ಲ ಹೇಳುತ್ತಾರೆ. ಎಸ್‌ಐಟಿಗೆ ನಾನು ಸಮಯ ನಿಗದಿ ಮಾಡಿಲ್ಲ. ತನಿಖೆ ಮಾಡಿ ವರದಿ ಕೊಡಿ ಎಂದು ಹೇಳಿದ್ದೇನೆ. ತನಿಖೆಗೆ ಯಾವುದೇ ಹಸ್ತಕ್ಷೇಪ ಇಲ್ಲ. ಜನರಿಗೆ ಸತ್ಯ ಗೊತ್ತಾಗಬೇಕು. ಬೇರೆ ತನಿಖೆ ಸದ್ಯಕ್ಕೆ ಅವಶ್ಯಕತೆ ಇಲ್ಲ ಅನಿಸುತ್ತದೆ ಎಂದು ಹೇಳಿದರು.

ಇನ್ನು ಆಸ್ತಿ ಮುದ್ರಾಂಕ ಶುಲ್ಕ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮಲ್ಲಿ ಕಡಿಮೆಯಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

3 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

3 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

3 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

3 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

3 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

3 hours ago