ಮೈಸೂರು ನಗರ

ಈ ಬಾರಿಯೂ ಸಿದ್ದರಾಮಯ್ಯ ಅವರೇ ದಸರಾ ಉದ್ಘಾಟನೆ ಮಾಡುತ್ತಾರೆ: ಸಚಿವ ಮಹದೇವಪ್ಪ ಸ್ಪಷ್ಟನೆ

ಮೈಸೂರು: ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಸಿಎಂ ಸಿದ್ದರಾಮಯ್ಯ ಅವರೇ ದಸರಾ ಮಾಡ್ತಾರೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಕಾಂಗ್ರೆಸ್ ಬಗ್ಗೆ ಆಗಲಿ ಸಿಎಂ ಬಗ್ಗೆ ಆಗಲಿ ಬಿಜೆಪಿಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

ಇನ್ನು ಸೆಪ್ಟೆಂಬರ್‌ನಲ್ಲಿ ರಾಜಕೀಯ ಕ್ರಾಂತಿ ಆಗುತ್ತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾವ ಕ್ರಾಂತಿಯೂ ಆಗಲ್ಲ. ಸಂಕ್ರಾಂತಿ ಎಲ್ಲರೂ ಚೆನ್ನಾಗಿ ಆಚರಣೆ ಮಾಡ್ತಾರೆ ಎಂದು ಮಾಧ್ಯಮಗಳ ಕಾಲೆಳೆದರು. ಇರೋದು ಒಂದೇ ಸಿಎಂ ಖುರ್ಚಿ. ಒಬ್ಬರೇ ಸಿಎಂ ಆಗೋಕೆ ಸಾಧ್ಯ. ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಿದೆ. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಸಿಎಂ ಬದಲಾಗುತ್ತಾರೆ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರು ಯಾವ ಅರ್ಥದಲ್ಲಿ ಹೇಳುತ್ತಿದ್ದಾರೆ ನನಗೆ ಗೊತ್ತಿಲ್ಲ. ನಾನು ಹೈಕಮಾಂಡ್ ಸಭೆಯಲ್ಲಿ ಇರಲಿಲ್ಲ. ಒಂದು ವೇಳೆ ಒಪ್ಪಂದ ಆಗಿದ್ರೆ ಅದು ನಮಗೆ ಗೊತ್ತಿಲ್ಲ. ಎಲ್ಲವೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.

ಇನ್ನು ಚಾಮರಾಜನಗರದಲ್ಲಿ ಈ ಬಾರಿ ದಸರಾ ಆಚರಣೆ ಇಲ್ಲ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮೈಸೂರಿನ ದಸರಾವನ್ನು ಎಲ್ಲರೂ ನೋಡಲಿ ಇಲ್ಲಿನ ದಸರಾದ ಮಹತ್ವ ಕಡಿಮೆ ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಮಾಡಿದ್ದಾರೆ. ದಸರಾ ಅಂದ್ರೆ ಅದು ಮೈಸೂರು. ಹಾಗಾಗಿ ಈ ಬಾರಿ ಈ ನಿರ್ಧಾರ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಣರಾಜ್ಯೋತ್ಸವ ಸಂಭ್ರಮ : ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಧ್ವಜಾರೋಹಣ, ಪರೇಡ್‌ ಆರಂಭ

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…

17 mins ago

ಫ್ಲೀಸ್. . ಬಸ್ ನಿಲ್ಲಿಸಿ ಸಾರ್. . !

ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್‌ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…

30 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ಗಾಂಧಿ, ಬುದ್ಧ, ಬಸವ ಅರ್ಜೆಂಟಾಗಿ ಬೇಕು

ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…

41 mins ago

ಸರ್ಕಾರ, ರಾಜ್ಯಪಾಲರ ಸಂಘರ್ಷ ; ನ್ಯಾಯಾಂಗ ಮಧ್ಯಪ್ರವೇಶ ಅಗತ್ಯ

ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…

55 mins ago

ದೇಶದ ಐಕ್ಯತೆ, ಪ್ರಗತಿಯ ಸಂಕೇತ-ಸಂವಿಧಾನ

ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…

1 hour ago

ದಿಲ್ಲಿ ಗಣರಾಜ್ಯೋತ್ಸವ | ಚಾ.ನಗರದ ಇಬ್ಬರು ಮಹಿಳೆಯರಿಗೆ ಆಹ್ವಾನ

ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…

1 hour ago