ಮೈಸೂರು ನಗರ

ಈ ಬಾರಿಯ ದಸರಾ ಹೊಸ ಸಿಎಂರಿಂದ ಉದ್ಘಾಟನೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗೋದು ಖಚಿತವಾಗಿದ್ದು, ಈ ಬಾರಿಯ ದಸರಾ ಹೊಸ ಸಿಎಂರಿಂದ ಉದ್ಘಾಟನೆಯಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ. ಸಿಎಂ ಕುರ್ಚಿಯ ಬಗ್ಗೆ ಅಗ್ರಿಮೆಂಟ್ ಆಗಿರೋದು ಖಚಿತ. ಅದಕ್ಕಾಗಿ ಕುರ್ಚಿ ಉಳಿಸಿಕೊಳ್ಳಲು ಇದೆಲ್ಲ ಟ್ರಯಲ್ ನಡೆಯುತ್ತಿದೆ. ಒಟ್ಟಾರೆ ಕಾಂಗ್ರೆಸ್ ಒಡೆದ ಮನೆಯಾಗಿದೆ. ಚೇರ್ ಉಳಿಸಿಕೊಳ್ಳಲು ಸಿಎಂ ಆ ರೀತಿ ಮಾತನಾಡುತ್ತಿದ್ದಾರೆ. ಈ ಬಾರಿ ಹೊಸ ಸಿಎಂ ದಸರಾ ಮಾಡುತ್ತಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.

ಇನ್ನು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ ತುರ್ತು ಪರಿಸ್ಥಿತಿಯ ಪರವೋ ಅಥವಾ ವಿರೋಧವೂ ಎಂಬುದನ್ನು ತಿಳಿಸಲಿ. ತುರ್ತು ಪರಿಸ್ಥಿತಿಯಲ್ಲಿ ಅಮಾಯಕ ದೇಶ ಪ್ರೇಮಿಗಳು ಸತ್ತಿದ್ದೇಕೆ? ಲಾಟಿ ಚಾರ್ಜ್ ಮಾಡಿದ್ದೇಕೆ ಎಂಬುದಕ್ಕೆ ಕಾಂಗ್ರೆಸ್ ಉತ್ತರವನ್ನೇ ಕೊಟ್ಟಿಲ್ಲ. ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳಲು ಆಗಿಲ್ಲ. ಈ ವಿಚಾರ ಮುಚ್ಚಿಡುವ ಮೂಲಕ ಕಳ್ಳಾಟ ಮಾಡುತ್ತಿದೆ. ಆ ವೇಳೆ ನಾನು ಕೂಡ ಬಂಧನವಾಗಿದ್ದೆ. ನಾನು ಕಾಲೇಜ್ ಸ್ಟೂಡೆಂಟ್ ಆಗಿದ್ದೆ ನನ್ನನ್ನೇಕೆ ಅರೆಸ್ಟ್ ಮಾಡಿದ್ದರು ಎಂಬುದನ್ನು ಹೇಳಿರಿ. ಅಘೋಷಿತ ತುರ್ತು ಎಂದರೆ ನಾವೇನು ಚುನಾವಣೆಗೆ ನಿಲ್ಲಬೇಡ ಎಂದು ತಡೆದಿದ್ದೇವಾ. ಬೇರೆ ಬೇರೆ ದೇಶಕ್ಕೆ ಹೋಗಿ ಭಾರತದ ಬಗ್ಗೆ ಮಾತನಾಡುತ್ತೀರಿ. ನಿಮ್ಮನ್ನು ಮೋದಿ ತಡೆದಿದ್ದಾರಾ.? ಅಂದು ಪತ್ರಿಕೆಯ ಕಂಟೆಂಟ್ ಬಗ್ಗೆ ಇಂದಿರಾಗಾಂಧಿ ತೀರ್ಮಾನ ಮಾಡ್ತಿದ್ರು. ಆದರೆ ಇಂದು ಮೋದಿ ಆ ರೀತಿ ನಡೆದುಕೊಳ್ಳುತ್ತಿದ್ದಾರಾ? ಎಂದು ಕಾಂಗ್ರೆಸ್‌ ನಾಯಕರಿಗೆ ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

9 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

18 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago