ಮೈಸೂರು ನಗರ

ಅಂಬೇಡ್ಕರ್‌ ಪುತ್ಥಳಿಗೆ ಅಪಮಾನ ಮಾಡಿದವರನ್ನು ಕೂಡಲೇ ಬಂಧಿಸಬೇಕು: ಮಾಜಿ ಶಾಸಕ ಅನ್ನದಾನಿ ಆಗ್ರಹ

ಮೈಸೂರು: ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಜೆಡಿಎಸ್ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಾ ಅನ್ನದಾನಿ ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲೇ ಇಂತಹ ಘಟನೆ ನಡೆದಿದ್ದರೂ, ಸಿದ್ದರಾಮಯ್ಯ ಮಾತ್ರ ಇದುವರೆಗೂ ಘಟನೆಯನ್ನು ವಿಷಾದಿಸಿಲ್ಲ. ಘಟನೆ ಬಗ್ಗೆ ಒಂದು ಹೇಳಿಕೆಯನ್ನಾದರೂ ನೀಡಿ ವಿಷಾದಿಸಬೇಕು. ತಪ್ಪಿತಸ್ಥರನ್ನು ಇನ್ನೂ ಬಂಧಿಸಿಲ್ಲ. ಸಿಎಂ ಬಳಿ ಇಂಟಲಿಜೆನ್ಸ್ ಇದೆ. ಆದರೂ ಆರೋಪಿಗಳನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ ಎಂದು ಆಕ್ರೋಶ ಹೊರಹಾಕಿದರು.

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಶಿಕ್ಷೆಯ ಜೊತೆಗೆ ತಪ್ಪು ಮಾಡಿದವನಿಗೆ ಸಂವಿಧಾನ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಪಾಠ ಮಾಡಬೇಕು. ಘಟನೆ ನಡೆದ ಬಳಿಕ ಸ್ಥಳೀಯರು ಅಸಮಾಧಾನಗೊಂಡಿದ್ದಾರೆ. ಸಿಎಂ ಪುತ್ರ ಡಾ.ಯತೀಂದ್ರ ಮಾತ್ರ ಬಂದಿದ್ದರು ಅಷ್ಟೇ. ಆದರೆ ಇನ್ನೂ ಕ್ರಮವಾಗಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ಸಿಎಂ ವಿಷಾದವನ್ನಾದರೂ ವ್ಯಕ್ತಪಡಿಸಲಿ ಎಂದು ಆಗ್ರಹಿಸಿದರು.

ಇನ್ನು ಪಾಕಿಸ್ತಾನ ವಿರುದ್ಧ ಯುದ್ಧ ಬೇಡ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡನೀಯ. ಯುದ್ಧ ಬೇಡ ಅಂದ್ರೆ ಏನು ಅರ್ಥ..? ಪಾಕಿಸ್ತಾನದವರು ಹೊಡೆದ್ರು ಸುಮ್ಮನಿರೋಕೆ ಅಗುತ್ತಾ? ಉಗ್ರರನ್ನು ಸೆದೆ ಬಡಿಯಬೇಕು. ಯಾವುದೇ ಕಾರಣಕ್ಕೂ ಸಿಎಂ ಆದವರೂ ಈ ರೀತಿ ಹೇಳಿಕೆ ನೀಡಬಾರದು ಎಂದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಮಂದಿ ಸಾವು

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…

49 mins ago

ಉಡುತೊರೆ ಜಲಾಶಯ | ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಕಾಡಾನೆಗಳ ರಕ್ಷಣೆ

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…

1 hour ago

ಯಾವ ನಾಯಕರು ಜೆಡಿಎಸ್‌ ಸಂಪರ್ಕಿಸಿಲ್ಲ ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…

2 hours ago

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…

2 hours ago

ಬಲಮುರಿ-ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿಷೇಧ ; ವ್ಯಾಪಾರಿಗಳ ಅಸಮಾಧಾನ

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…

2 hours ago

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

3 hours ago