ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದು, ಹುಲಿ ಸಂಚರಿಸಿರುವ ಸುಳಿವು ಹಾಗೂ ಹೆಜ್ಜೆಗಳು ಕಂಡು ಬರಲಿಲ್ಲ. ಆದರೆ, ತೋಟದ ಮನೆಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಹುಲಿ ಓಡಾಡುತ್ತಿರುವ ದೃಶ್ಯ ಸೆರೆಯಾಗಿದ್ದು, ಅದನ್ನು ಕಂಡ ಅರಣ್ಯಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಎರಡನೇ ದಿನ ಕಾರ್ಯಾಚರಣೆ
ಹುಲಿ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳಾದ ಮರಟಿಕ್ಯಾತನ ಹಳ್ಳಿ, ಗೋಹಳ್ಳಿ, ಚಿಕ್ಕಿರೆ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಜಾಗೃತಿ ಮೂಡಿಸಿ ಥರ್ಮಲ್ ಡ್ರೋನ್ ಮೂಲಕ ಹುಲಿ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ.
ಕಣಿಯನಹುಂಡಿ ಬಳಿ ಕಾಣಿಸಿಕೊಂಡಿದ್ದು ಇದೇ ಹುಲಿನಾ?
ಜ.30 ರಂದು ಕಣಿಯನಹುಂಡಿ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಹುಲಿ ಮರಟಿಕ್ಯಾತನಹಳ್ಳಿ, ಜಟ್ಟಿಹುಂಡಿ ಬಳಿ ಕಾಣಿಸಿಕೊಂಡಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಆದರೆ, ಮಂಗಳವಾರ ಬೆಳಿಗ್ಗೆ ಕಾಣಿಸಿಕೊಂಡ ಹುಲಿ ಯಾವುದು ಎಂದು ಪತ್ತೆ ಮಾಡಲು ಅರಣ್ಯ ಸಿಬ್ಬಂದಿ ಎರಡನೇ ದಿನ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಡಿಸಿಎಫ್ ಕೆ.ಪರಮೇಶ್, ಎಸಿಎಫ್ ರವೀಂದ್ರ ಆರ್‌ಎಫ್‌ಒ ಸಂತೋಷ್ ಹೂಗಾರ್, ಡಿಆರ್‌ಎಫ್ಒ ಸತೀಶ್ ಸೇರಿದಂತೆ 20ಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…