ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡು ಜನರನ್ನು ಭಯಭೀತರನ್ನಾಗಿಸಿದೆ.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ. ಆದರೆ ಅರಣ್ಯಾಧಿಕಾರಿಗಳಿಗೆ ಎಲ್ಲೂ ಕೂಡ ಹುಲಿ ಕಾಣಿಸಿಕೊಳ್ಳದೇ ಇರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಇನ್ನು ಕಳೆದ ಕೆಲ ದಿನಗಳ ಹಿಂದೆ ಮೈಸೂರು ಹೊರವಲಯದ ಬಿಇಎಂಎಲ್ ಬಳಿಯೂ ಹುಲಿ ಕಾಣಿಸಿಕೊಂಡಿದ್ದು, ಜನರನ್ನು ಭಯಭೀತರನ್ನಾಗಿಸಿತ್ತು. ಈಗ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿದ್ದಾರೆ.





