ಮೈಸೂರು: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ತಿರಂಗಾಯಾತ್ರೆ ಆಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ ಯಶಸ್ವಿ ಕಾರ್ಯಾಚರಣೆ ಕೈಗೊಂಡಿತ್ತು.
ಈ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ತಿರಂಗಾಯಾತ್ರೆ ಆಯೋಜನೆ ಮಾಡಲಾಗಿದೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾದ ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ಮೈಸೂರಿನಲ್ಲಿ ಮೇ.16ರಂದು ತಿರಂಗಾಯಾತ್ರೆ ಆಯೋಜನೆ ಮಾಡಿದ್ದೇವೆ. ಪಕ್ಷಾತೀತವಾಗಿ ಈ ತಿರಂಗಾಯಾತ್ರೆ ನಡೆಯಲಿದೆ ಎಂದರು.
ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಯಾತ್ರೆ ಆರಂಭವಾಗಲಿದ್ದು, ಚಿಕ್ಕಗಡಿಯಾರ ವೃತ್ತದವರೆಗೂ ಸಾಗಿ ದೇವರಾಜ ಅರಸು ರಸ್ತೆ, ಜೆಎಲ್‌ಬಿ ರಸ್ತೆಯ ಮೂಲಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಯಾತ್ರೆ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.





