ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವರ್ಧಂತಿ ಸಂಭ್ರಮ ಮನೆಮಾಡಿದ್ದು, ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ, ತಾಯಿಯ ದರ್ಶನ ಪಡೆಯುತ್ತಿದ್ದಾರೆ.
ಮೈಸೂರಿನ ಅಧಿದೇವತೆಯಾದ ಚಾಮುಂಡೇಶ್ವರಿ ದೇವಿಯ ಜನ್ಮದಿನವನ್ನು ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಎಂದು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಹೋಮ ಹವನಗಳೊಂದಿಗೆ ದೇವಿಯ ಮೆರವಣಿಗೆಯನ್ನು ಮಾಡಲಾಯಿತು.
ಇಡೀ ಮೈಸೂರು ನಗರವು ತಮ್ಮ ನೆಚ್ಚಿನ ದೇವಿಯ ಜನ್ಮದಿನವನ್ನು ಬೆಳಿಗ್ಗೆಯಿಂದಲೇ ಪ್ರಸಾದ ವಿತರಿಸುವ ಮೂಲಕ ಆಚರಿಸಲಾಗುತ್ತಿದೆ.
ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ದಿನದಂದು ತಾಯಿ ಚಾಮುಂಡಿಯನ್ನು ಅದ್ದೂರಿಯಾಗಿ ಅಲಂಕರಿಸಲಾಗಿದ್ದು, ಹೂವು, ಹಣ್ಣುಗಳಿಂದ ವಿಶೇಷವಾಗಿ ಅಲಂಕೃತಗೊಂಡ ದೇವಿಯು ಗರ್ಭಗುಡಿಯಿಂದ ಸಾರ್ವಜನಿಕರಿಗೆ ನೇರ ದರ್ಶನ ನೀಡಿದ್ದಾಳೆ.
ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ದೇವಿಗೆ ಮಾತ್ರವಲ್ಲ, ಇಡೀ ದೇವಾಲಯವನ್ನು ಹೂವು ಮತ್ತು ಹಣ್ಣುಗಳಿಂದ ಸುಂದರವಾಗಿ ಅಲಂಕರಿಸಲಾಗಿದೆ.
ಇಂದು ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿರ್ಬಂಧಿಸಲಾಗಿದ್ದು, ಸಾರ್ವಜನಿಕರಿಗೆ ವಿಶೇಷ ಬಸ್ ಸೌಲಭ್ಯಗಳನ್ನು ಮಾಡಲಾಗಿದೆ.
ಬೆಟ್ಟಕ್ಕೆ ಬರುವ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗಿದ್ದು, ಪ್ರಸಾದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಬೆಟ್ಟದಲ್ಲಿ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದುಕೊಳ್ಳಬಹುದಾಗಿದೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…