Mysore
17
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ

ಮೈಸೂರು: ಹತ್ತು ದಿನಗಳ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ಅರಮನೆ ನಗರಿ ಸಜ್ಜಾಗಿದೆ.

ರಾಜ್ಯದ ಅತಿದೊಡ್ಡ ಮತ್ತು ಪ್ರಮುಖ ಹಬ್ಬಗಳಲ್ಲಿ ಒಂದೆಂದು ಪರಿಗಣಿಸಲಾದ ದಸರಾ, ಅಂದಿನ ಮೈಸೂರು ರಾಜವಂಶದ ಅರಸರ ನೇತೃತ್ವದಲ್ಲಿ ಜನಸಾಮಾನ್ಯರ ಹಬ್ಬವಾಗಿ ಬೆಳೆದಿದೆ.

ಇಂದು ಚಾಮುಂಡಿಬೆಟ್ಟದ ದೇವಾಲಯದ ಆವರಣದಲ್ಲಿ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.

ಹತ್ತು ದಿನಗಳ ದಸರಾ ಮಹೋತ್ಸವದಲ್ಲಿ ಪ್ರತಿ ವರ್ಷದಂತೆ ಜಾನಪದ ಕಲಾ ಪ್ರಕಾರಗಳೊಂದಿಗೆ ಕರ್ನಾಟಕದ ಸಾಂಸ್ಕೃತಿಕ ಪರಂಪರೆ ಪ್ರದರ್ಶಿಸಲಾಗುತ್ತದೆ.

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷ ಅದ್ಧೂರಿ ದಸರಾ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದೆ.

Tags:
error: Content is protected !!