Mysore
25
clear sky

Social Media

ಗುರುವಾರ, 19 ಮಾರ್ಚ್ 2026
Light
Dark

ಸಿಎಂ ಸಿದ್ದರಾಮಯ್ಯ ಪರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ವಕೀಲರು

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿಂದು ವಕೀಲರು ಮೌನ ಪ್ರತಿಭಟನೆ ನಡೆಸಿದರು.

ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ ಮೈಸೂರಿನಲ್ಲಿಂದು ವಕೀಲರು ಕಲಾಪಗಳನ್ನು ಬಹಿಷ್ಕರಿಸಿ ಮೌನ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ನ್ಯಾಯಾಲಯದ ಮುಂಭಾಗವಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಜಮಾಯಿಸಿದ ವಕೀಲರು, ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ನಡೆಗೆ ಖಂಡನೆ ವ್ಯಕ್ತಪಡಿಸಿದರು.

ಮೈಸೂರು ವಕೀಲದ ಸಂಘದ ಅಧ್ಯಕ್ಷ ಲೋಕೇಶ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವಾರು ವಕೀಲರು ಭಾಗಿಯಾಗಿದ್ದರು.

Tags:
error: Content is protected !!