ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಗಿದೆ.
ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಗಿದೆ.
ಕಾಡಿನಿಂದ ನಾಡಿಗೆ ಬಂದ ದಸರಾ ಗಜಪಡೆಯನ್ನು ತೂಕ ಪರೀಕ್ಷೆ ಮಾಡುವುದು ಆಗಿನಿಂದಲೂ ನಡೆದುಕೊಂಡು ಬಂದಿರುವ ಪ್ರತೀತಿ. ತೂಕದ ಆಧಾರದ ಮೇಲೆಯೇ ಗಜಪಡೆಗೆ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಹೀಗಾಗಿ ಇಂದು ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸಾಯಿರಾಂ ಅಂಡ್ ಕೋ, ಎಲೆಕ್ಟ್ರಿಕ್ ತೂಕ ಮಾಪನ ಕೇಂದ್ರದಲ್ಲಿ 9 ಆನೆಗಳನ್ನು ತೂಕ ಮಾಡಲಾಯಿತು.
ಈ 9 ಆನೆಗಳ ಪೈಕಿ ಕ್ಯಾಪ್ಟನ್ ಅಭಿಮನ್ಯುನೇ ಅತೀ ಹೆಚ್ಚು ತೂಕ ಇದ್ದಾನೆ. ಅಭಿಮನ್ಯು 5560 ಕೆಜಿ ತೂಕ ಹೊಂದಿದ್ದಾನೆ. ಉಳಿದ ಆನೆಗಳಿಗಿಂತ ಅಧಿಕ ತೂಕ ಹೊಂದಿದ್ದಾನೆ.
ಉಳಿದಂತೆ ವರಲಕ್ಷ್ಮೀ 3495, ಭೀಮ 4945, ಏಕಲವ್ಯ 4730, ಲಕ್ಷ್ಮೀ 2480, ರೋಹಿತ್ 3625, ಗೋಪಿ 4970, ಕಂಜನ್ 4515, ಧನಂಜಯ 5155 ಕೆಜಿ ತೂಕ ಇದ್ದಾನೆ.
ದಸರಾ ಗಜಪಡೆಯ ತೂಕ ಪರೀಕ್ಷೆ ಕುರಿತು ಮೈಸೂರು ವಲಯ ವನ್ಯಜೀವಿ ವಿಭಾಗದ ಡಿಸಿಎಫ್ ಡಾ.ಪ್ರಭುಗೌಡ ಪ್ರತಿಕ್ರಿಯೆ ನೀಡಿದ್ದು, ಆನೆಗಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ. ಆನೆಗಳ ತೂಕದ ಆಧಾರದ ಮೇಲೆ ಪೌಷ್ಟಿಕ ಆಹಾರ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಜಂಬೂಸವಾರಿ ಮೆರವಣಿಗೆಗೂ ಮುನ್ನ ಮತ್ತೊಮ್ಮೆ ತೂಕ ಪರೀಕ್ಷೆ ಮಾಡುತ್ತೇವೆ. ನಾಳೆಯಿಂದಲೇ ಗಜಪಡೆಯ ನಿತ್ಯ ತಾಲೀಮು ಆರಂಭವಾಗುತ್ತದೆ ಎಂದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…