Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಇಂದು ಮತ್ತು ನಾಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿಗೆ ಆಗಮಿಸಲಿದ್ದು, ಸಂಜೆ 4 ಗಂಟೆಗೆ ಚಾಮುಂಡಿಬೆಟ್ಟದ ಮೆಟ್ಟಿಲ ಮೂಲಕ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಲಿದ್ದಾರೆ.

ಬಳಿಕ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇನ್ನು ನಾಳೆ ಬೆಳಿಗ್ಗೆ ಅರಮನೆ ಆವರಣದಲ್ಲಿ ಮಾವುತರು ಹಾಗೂ ಕಾವಾಡಿಗರಿಗೆ ಉಪಹಾರ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

 

Tags: