ಮೈಸೂರು: ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ನಟ ಶ್ರೀಮುರುಳಿ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಟ ಶ್ರೀಮುರುಳಿ ಇಂದು(ಡಿಸೆಂಬರ್.17) ತಮ್ಮ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಈ ವೇಳೆ ಚಾಮುಂಡಿ ಬೆಟ್ಟದಲ್ಲಿ ಶ್ರೀಮುರುಳಿಯನ್ನು ನೋಡಿದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದರು. ಬಳಿಕ ಈ ಸಂದರ್ಭದಲ್ಲಿ ಕೆಲ ಅಭಿಮಾನಿಗಳೊಂದಿಗೆ ಶ್ರೀಮುರುಳಿ ಫೋಟೋ ತೆಗೆಸಿಕೊಂಡಿದ್ದಾರೆ.





